ಕಾಲಮಿತಿಯಲ್ಲಿ ಕಾಮಗಾರಿ ಪ್ರಗತಿ ಸಾಧಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ

| Published : Feb 16 2024, 01:49 AM IST

ಕಾಲಮಿತಿಯಲ್ಲಿ ಕಾಮಗಾರಿ ಪ್ರಗತಿ ಸಾಧಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ
Share this Article
  • FB
  • TW
  • Linkdin
  • Email

ಸಾರಾಂಶ

ಕಿಲ್ಲಾರಹಟ್ಟಿ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲಾ ಆವರಣ ಮತ್ತು ಶಾಲಾ ಕಟ್ಟಡ ವೀಕ್ಷಣೆ ಮಾಡಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿದರು.

ಕುಷ್ಟಗಿ: ತಾಲೂಕಿನ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಭೇಟಿ ನೀಡಿ ವಿವಿಧ ಕಾಮಗಾರಿ ವೀಕ್ಷಿಸಿ ಗ್ರಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸದಸ್ಯರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸ್ವಚ್ಛ ಭಾರತ ಮಿಷನ್, ವಸತಿ ಯೋಜನೆ, ಗ್ರಂಥಾಲಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ನಂತರ ಸಿಡಿಪಿಒ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ತೋಟಗಾರಿಕೆ ಮತ್ತು ಕೃಷಿ ಇಲಾಖೆ ಕುರಿತು ಸಭೆಯಲ್ಲಿ ಪ್ರಗತಿ ಕುರಿತು ಚರ್ಚಿಸಿ ಕಾಲಮಿತಿಯಲ್ಲಿ ಪ್ರಗತಿ ಸಾಧಿಸಬೇಕೆಂದು ತಿಳಿಸಿದರು.ನಂತರ ಕಿಲ್ಲಾರಹಟ್ಟಿ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲಾ ಆವರಣ ಮತ್ತು ಶಾಲಾ ಕಟ್ಟಡ ವೀಕ್ಷಣೆ ಮಾಡಿ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಚರ್ಚಿಸಿದರು. ಗರ್ಜಿನಾಳ ಗ್ರಾಮಕ್ಕೆ ಭೇಟಿ ನೀಡಿ ಜೆಜೆಎಂ ಯೋಜನೆಯ ಕಾಮಗಾರಿಯನ್ನು ಖುದ್ದಾಗಿ ಮನೆ ಮನೆ ಭೇಟಿ ಮಾಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ಯೋಜನೆಯ ಕುರಿತು ಅಭಿಪ್ರಾಯ ಆಲಿಸಿದರು.ಈ ಸಂದರ್ಭದಲ್ಲಿ ತಾಪಂ ಇಒ ನಿಂಗಪ್ಪ ಎಸ್.ಮಸಳಿ, ಸಹಾಯಕ ನಿರ್ದೇಶಕ ನಿಂಗನಗೌಡ, ಎಇಇ ವಿಜಯಕುಮಾರ್, ತೋಟಗಾರಿಕೆ ಸಹಾಯಕ ನಿರ್ದೇಶಕ ದುರ್ಗಾಪ್ರಸಾದ್, ಅರಣ್ಯ ಇಲಾಖೆ ಅಧಿಕಾರಿ ಸತೀಶ್, ಸಿಡಿಪಿಓ ಯಲ್ಲಮ್ಮ, ಕೃಷಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿ, ಗ್ರಾಪಂ ಅಧ್ಯಕ್ಷ ಶರಣಗೌಡ, ಉಪಾಧ್ಯಕ್ಷ ರಾಘವೇಂದ್ರ, ಸರ್ವ ಸದಸ್ಯರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ಸಿಬ್ಬಂದಿ ಚಂದ್ರಶೇಖರ, ಬಸವರಾಜ್, ಗ್ರಾಪಂ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.