ತಿನಿಸುಗಳಿಗೆ ಕೃತಕ ಬಣ್ಣ ಬಳಕೆ ನಿಷೇಧ

| Published : Aug 14 2024, 12:46 AM IST

ಸಾರಾಂಶ

ಕಬಾಬ್ ಮತ್ತು ಗೋಬಿ ಮಂಜೂರಿ ತಯಾರಿಕೆಯಲ್ಲಿ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ 7 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷಗಳ ವರೆಗೆ ದಂಡ ವಿಧಿಸಬಹುದಾಗಿದೆ.ಈ ಕುರಿತು ಮಾರಾಟಗಾರರಿಗೆ ಅರಿವು ಮೂಡಿಸಬೇಕು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕಬಾಬ್ ಮತ್ತು ಗೋಬಿ ತಿನಿಸುಗಳನ್ನು ತಯಾರಿಸುವಾಗ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಮರಿಣಾಮ ಬೀರುವುದರಿಂದ ಅಂತಹ ಕೃತಕ ಬಣ್ಣ ಬಳಕೆಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಎನ್. ರವೀಂದ್ರ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಬಾಬ್ ಮತ್ತು ಗೋಬಿ ಮಂಜೂರಿ ತಯಾರಿಕೆಯಲ್ಲಿ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ 7 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷಗಳ ವರೆಗೆ ದಂಡ ವಿಧಿಸಬಹುದಾಗಿದೆ.ಈ ಕುರಿತು ಮಾರಾಟಗಾರರಿಗೆ ಅರಿವು ಮೂಡಿಸಬೇಕು. ಹೋಟೆಲ್ ಮಾಲೀಕರು,ಆಹಾರ ಉದ್ಧಿಮೆದಾರರು ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು.15 ದಿನದೊಳಗೆ ಸೂಕ್ತ ಕ್ರಮ

ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳು ಮತ್ತು ಮಾಂಸದ ಅಂಗಡಿಗಳು ಹಾಗೂ ಸಂಸ್ಕರಣಾ ಕೈಗಾರಿಕೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆಯನ್ವಯ ಪರವಾನಗಿ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಉಲ್ಲಂಘನೆಯಾದಲ್ಲಿ 15 ದಿನದೊಳಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಈ ಸಂರ್ದಭದಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ವಿಭಾಗ ಹಾಗೂ ಅಂಕಿತ ಅಧಿಕಾರಿ ಡಾ.ಬಿ.ದರ್ಮೇಂದ್ರ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಈಶ್ವರಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಎಸ್ ಮಹೇಶ್ ಕುಮಾರ್, ಆಹಾರ ಸುರಕ್ಷತಾ ಅಧಿಕಾರಿ ಜಿ.ಹರೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮುನಿರತ್ನಮ್ಮ ಇದ್ದರು.