ಕನ್ನಡಪ್ರಭ ವಾರ್ತೆ ಬೆಳಗಾವಿಅಧಿವೇಶನದ ಕಾಲಕ್ಕೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸುವರ್ಣ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನ.20ರಿಂದ ಡಿ.19 ವರೆಗೆ 30 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಆದೇಶ ಹೊರಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಅಧಿವೇಶನದ ಕಾಲಕ್ಕೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸುವರ್ಣ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನ.20ರಿಂದ ಡಿ.19 ವರೆಗೆ 30 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಆದೇಶ ಹೊರಡಿಸಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 2ರಿಂದ 11ರವರೆಗೆ ಜರುಗಲಿರುವ ವಿಧಾನ ಮಂಡಲ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ರೈತರು ಹಾಗೂ ಇತರ ಸಾರ್ವಜನಿಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ತಮ್ಮ ಬೇಡಿಕೆಗಳ ಕಡೆಗೆ ಸರ್ಕಾರದ ಗಮನ ಸೆಳೆಯಲು ಬೆಳಗಾವಿ ಸುವರ್ಣ ವಿಧಾನಸೌಧದ ಮುಂದೆ ಧರಣಿ ಸತ್ಯಾಗ್ರಹಗಳನ್ನು ಆಯೋಜಿಸಿ ಸುವರ್ಣ ವಿದಾನಸೌಧದ ಮುಂದೆ ಹಾಯ್ದು ಹೋಗಿರುವ ರಾಷ್ಟ್ಕೀಯ ಹೆದ್ದಾರಿ 48 ರಲ್ಲಿಯ ವಾಹನಗಳ ಸಂಚಾರಕ್ಕೆ ವ್ಯತ್ಯಯ ಉಂಟು ಮಾಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಿಕ್ಕಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.