ಕೊಪ್ಪಳ ಜಿಲ್ಲಾಧಿಕಾರಿಯಾಗಿ ಪದೋನ್ನತಿ: ಡಾ.ಸುರೇಶ್ ಇಟ್ನಾಳ್‌ಗೆ ಬೀಳ್ಕೊಡುಗೆ

| Published : Jun 25 2025, 11:47 PM IST

ಕೊಪ್ಪಳ ಜಿಲ್ಲಾಧಿಕಾರಿಯಾಗಿ ಪದೋನ್ನತಿ: ಡಾ.ಸುರೇಶ್ ಇಟ್ನಾಳ್‌ಗೆ ಬೀಳ್ಕೊಡುಗೆ
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ್ ವಿಠ್ಠಲ್ ರಾವ್ ಅವರಿಗೆ ಸ್ವಾಗತ ಹಾಗೂ ಸಿಇಒ ಆಗಿ ಸೇವೆ ಸಲ್ಲಿಸಿ, ಪದೋನ್ನತಿಯೊಂದಿಗೆ ಕೊಪ್ಪಳ ಜಿಲ್ಲಾಧಿಕಾರಿ ಆಗಿರುವ ಡಾ.ಸುರೇಶ್ ಬಿ. ಇಟ್ನಾಳ್ ಅವರಿಗೆ ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

- ನೂತನ ಸಿಇಒ ಗಿಟ್ಟೆ ಮಾಧವ ವಿಠ್ಠಲ್‌ರಿಗೆ ಸ್ವಾಗತ

- - -

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ್ ವಿಠ್ಠಲ್ ರಾವ್ ಅವರಿಗೆ ಸ್ವಾಗತ ಹಾಗೂ ಸಿಇಒ ಆಗಿ ಸೇವೆ ಸಲ್ಲಿಸಿ, ಪದೋನ್ನತಿಯೊಂದಿಗೆ ಕೊಪ್ಪಳ ಜಿಲ್ಲಾಧಿಕಾರಿ ಆಗಿರುವ ಡಾ.ಸುರೇಶ್ ಬಿ. ಇಟ್ನಾಳ್ ಅವರಿಗೆ ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಜಿಲ್ಲೆಯಲ್ಲಿ ಜಿಪಂ ಸಿಇಒ ಆಗಿ ಸೇವೆ ಸಲ್ಲಿಸಿದ ಸುರೇಶ್ ಬಿ. ಇಟ್ನಾಳ್ ಅವರನ್ನು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸನ್ಮಾನಿಸಿ ಮಾತನಾಡಿ, ಸ್ವಾರ್ಥ ಇಲ್ಲದೇ ದೀರ್ಘವಾಗಿ ಕೆಲಸ ಮಾಡಿದಂತಹ ವ್ಯಕ್ತಿ ಇವರು. ದಕ್ಷತೆ, ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡಿದ ಪರಿಣಾಮ ಅವರು ಇಂದು ಪದೋನ್ನತಿಯೊಂದಿಗೆ ವರ್ಗಾವಣೆ ಆಗುತ್ತಿರುವುದು ಸಂತಸದ ಸಂಗತಿ ಎಂದರು.

ಸನ್ಮಾನ ಸ್ವೀಕರಿಸಿದ ಡಾ.ಸುರೇಶ್ ಬಿ. ಇಟ್ನಾಳ್ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದಾಗ ಎಲ್ಲ ಅಧಿಕಾರಿಗಳು ತುಂಬಾ ಸಹಕಾರ ನೀಡಿದ್ದಾರೆ. ವಿಶ್ವ ಸಂಸ್ಥೆ ನೆರವಿನಡಿ ಜಿಲ್ಲೆಯಲ್ಲಿ 100 ಗ್ರಾಮಗಳಿಗೆ ನಿರಂತರ 24*7 ಕುಡಿಯುವ ನೀರು ಪೂರೈಕೆ ಮಾಡಲು ಗುರಿ ಹೊಂದಿ, ಈಗಾಗಲೇ 13 ಗ್ರಾಮಗಳಲ್ಲಿ ಅನುಷ್ಠಾನ ಮಾಡಲಾಗಿದೆ. ಆಗಸ್ಟ್ ವೇಳೆಗೆ ಜಿಲ್ಲೆಯ 100 ಗ್ರಾಮಗಳು 24*7 ಕುಡಿಯುವ ನೀರಿನ ಪೂರೈಕೆ ಗ್ರಾಮಗಳಾಗಲಿವೆ. ಈ ಸಾಧನೆಯಲ್ಲಿ ರಾಜ್ಯದಲ್ಲಿಯೇ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಎಲ್ಲ ಕ್ಷೇತ್ರಗಳಲ್ಲಿ ದಾವಣಗೆರೆ ಜಿಲ್ಲೆ ರಾಜ್ಯದ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿರಲು ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಉಪ ಕಾರ್ಯದರ್ಶಿ ಮಮತ ಹೊಸಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ಜಿಪಂ ಯೋಜನಾಧಿಕಾರಿ ಮಲ್ಲನಾಯ್ಕ ಇತರರು ಉಪಸ್ಥಿತರಿದ್ದರು.