ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಹುದ್ದೆಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಹಿರಿಯ ಉಪನ್ಯಾಸಕರಾಗಿ ಮುಂಬಡ್ತಿ ಹೊಂದಿದ ಮುಖ್ಯಶಿಕ್ಷಕಿ ಬಿ.ಎನ್.ಪುಷ್ಪಾ ಅವರನ್ನು ಶಾಲೆಯಲ್ಲಿ ಸನ್ಮಾನಿಸಿ, ಬೀಳ್ಕೊಡಲಾಯಿತು.ಸಮಾರಂಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, 25 ವರ್ಷ ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾಗಿ ಉತ್ತಮ ಕರ್ತವ್ಯ ಸಲ್ಲಿಸಿರುವ ಪುಷ್ಪಾ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದರು.ಬಿ.ಎನ್.ಪುಷ್ಪ ಮಾತನಾಡಿ, ಶಾಲಾ ಶಿಕ್ಷಕರು ಮತ್ತು ಸಮುದಾಯದ ಸಹಭಾಗಿತ್ವದಲ್ಲಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಅಭಿವೃದ್ಧಿಗೆ ಸಹಕರಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದರು.ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಪಿ. ನವೀನ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಕೋಶಾಧಿಕಾರಿ ಎ.ಸಿ.ಮಂಜುನಾಥ್, ಡಯಟ್‌ನ ನಿವೃತ್ತ ಹಿರಿಯ ಉಪನ್ಯಾಸಕಿ ಬಿ.ಬಿ.ಸಾವಿತ್ರಿ, ಎಸ್‌ಡಿಎಂಸಿ ಅಧ್ಯಕ್ಷ ಮುನೀರ್, ಸದಸ್ಯ ಕೆ.ಎನ್.ದೇವರಾಜ್, ಮುಖ್ಯಶಿಕ್ಷಕ ಎಸ್.ಎಸ್.ಗೋಪಾಲ್, ಜಫ್ರಿ ಡಿಸೋಜ, ಪರಮೇಶ್ವರಪ್ಪ, ಕೆ.ಎಂ.ಐಯಚ್ಚು, ಬಾಲಕೃಷ್ಣ, ಟಿ.ಜಿ.ಪ್ರೇಮಕುಮಾರ್, ಎಚ್.ಎಸ್.ರಾಜೇಶ್ವರಿ, ತ್ರೀವೇಣಿ, ನಿವೃತ್ತ ಮುಖ್ಯಶಿಕ್ಷಕ ಬಿ.ಆರ್.ಕುಮಾರ್, ಎಚ್.ವೈ.ಶ್ರೀನಿವಾಸ್, ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಡಾ.ಸದಾಶಿವಯ್ಯ ಎಸ್. ಪಲ್ಲೇದ್, ನಿವೃತ್ತ ಶಿಕ್ಷಕರಾದ ಎಂ.ರಂಗಸ್ವಾಮಿ, ಉ.ರಾ.ನಾಗೇಶ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಂ.ಎಂ.ಭಾರತಿ, ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))