ಕಾರ್ಮಿಕ ಇಲಾಖೆಯ ಯೋಜನೆಗಳ ಪ್ರಚಾರಕ್ಕೆ ಚಾಲನೆ

| Published : Nov 13 2024, 12:01 AM IST

ಸಾರಾಂಶ

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಡುವ ಉದ್ದೇಶದಿಂದ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕಾರ್ಮಿಕ ಇಲಾಖೆಯಲ್ಲಿ ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಕಾರ್ಮಿಕರ ಹೆಸರನ್ನು ನೋದಾಯಿಸಿ ಸ್ಮಾರ್ಟ್ ಕಾರ್ಡ್ ನೀಡುವ ಬಗ್ಗೆ ಹಾಗೂ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಕುರಿತು ಜಾಗೃತಿ ಮೂಡಿಸಲು ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಚಾಲನೆ ನೀಡಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಎಸ್.ಸಿ, ಎಸ್.ಟಿ ಕಾಲೋನಿಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನೇಮಕಾತಿ ನಿರ್ಮೂಲನೆ ಕುರಿತು ಜಿಲ್ಲಾಡಳಿತ ಭವನದ ಆವರಣದಲ್ಲಿ ಆಟೋ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ನಂತರ ಮಾತನಾಡಿದ ಜಿಲ್ಲಾಧಿಕಾರಿ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಡುವ ಉದ್ದೇಶದಿಂದ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

ಬಾಲಕಾರ್ಮಿಕರ ನೇಮಕ ನಿಷಿದ್ಧ

ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನೇಮಕಾತಿ ನಿರ್ಮೂಲನೆ ಕಾಯ್ದೆಯಡಿ ಬಾಲ್ಯಾವಸ್ಥೆ, ಕಿಶೋರಾವಸ್ಥೆ, ಕಾರ್ಮಿಕರನ್ನು ನೇಮಿಸಿಕೊಳ್ಳುವವರಿಗೆ 20,000ರು.ಗಳಿಂದ 50,000 ರು,ಗಳವರೆಗೆ ದಂಡ ಅಥವಾ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ವಿಧಿಸಲು ಅವಕಾಶವಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶಭಾನ ಅಜ್ಮಿ, ಕಾರ್ಮಿಕ ನಿರೀಕ್ಷಕಿ ಎಂ.ಮಂಜುಳ ಹಾಗೂ ಸಿಬ್ಬಂದಿ ಇದ್ದರು.