ಕ್ರೀಡೆಯಿಂದ ದೈಹಿಕ- ಮಾನಸಿಕ ಆರೋಗ್ಯ ವೃದ್ಧಿ

| Published : Jan 18 2024, 02:04 AM IST

ಕ್ರೀಡೆಯಿಂದ ದೈಹಿಕ- ಮಾನಸಿಕ ಆರೋಗ್ಯ ವೃದ್ಧಿ
Share this Article
  • FB
  • TW
  • Linkdin
  • Email

ಸಾರಾಂಶ

ಸೂಲಿಬೆಲೆ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ನಿರ್ದೇಶಕ ಚನ್ನಪ್ಪ ಹೇಳಿದರು.

ಸೂಲಿಬೆಲೆ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ನಿರ್ದೇಶಕ ಚನ್ನಪ್ಪ ಹೇಳಿದರು. ವಿವೇಕಾನಂದ ಪ್ರೌಢಶಾಲೆ ಆವರಣದಲ್ಲಿ ನೆಹರು ಯುವ ಕೇಂದ್ರ ಬೆಂ.ಗ್ರಾ. ಜಿಲ್ಲೆ ಹಾಗೂ ನಾಡಪ್ರಭು ಕೆಂಪೇಗೌಡ ಯುವಕರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ಸಪ್ತಾಹದ ಪ್ರಯುಕ್ತ ಪಿಟ್ ನೆಸ್ ಡೇ ಕಾರ್ಯಕ್ರಮದಲ್ಲಿ ವಾಲಿಬಾಲ್ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಹೋಬಳಿ, ತಾಲ್ಲೂಕು, ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಕ್ರೀಡಗಳಲ್ಲೂ ಪಾಲ್ಗೊಂಡು ಶಾಲೆಗೆ ಕೀರ್ತಿ ತರಬೇಕು ಎಂದರು. ವಿವೇಕಾನಂದ ಪ್ರೌಢಶಾಲೆ ಪ್ರಭಾರಿ ಮುಖ್ಯಶಿಕ್ಷಕ ಡಿ.ನಾರಾಯಣಸ್ವಾಮಿ, ಜೇನುಗೂಡು ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ಎಸ್.ಕೆ.ವಸಂತಕುಮಾರ್, ಅತ್ತಿಬೆಲೆಮಂಜುನಾಥ್‌ ಇತರರಿದ್ದರು.ಚಿತ್ರ; ೧೭ ಸೂಲಿಬೆಲೆ ೩ ಜೆಪಜೆ ನಲ್ಲಿದೆ

ಸೂಲಿಬೆಲೆಯ ವಿವೇಕಾನಂದ ಪ್ರೌಢಶಾಲೆಯಲ್ಲಿ ನೆಹರು ಯುವ ಕೇಂದ್ರ ಬೆಂ.ಗ್ರಾ. ಜಿಲ್ಲೆ ಹಾಗೂ ನಾಡಪ್ರಭು ಕೆಂಪೇಗೌಡ ಯುವಕರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ಸಪ್ತಾಹದ ಪ್ರಯುಕ್ತ ಪಿಟ್ ನೆಸ್ ಡೇ ಕಾರ್ಯಕ್ರಮದಲ್ಲಿ ವಾಲಿಬಾಲ್ ತಂಡಗಳಿಗೆ ಬಹುಮಾನ ವಿತರಿಸಿದರು.