ಎಸ್ಸಿ, ಎಸ್ಟಿ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಇತ್ಯರ್ಥಗೊಳಿಸಿ

| Published : Jul 11 2024, 01:33 AM IST

ಎಸ್ಸಿ, ಎಸ್ಟಿ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಇತ್ಯರ್ಥಗೊಳಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಸ್ಪಂದಿಸಿ ಇತ್ಯರ್ಥಗೊಳಿಸಿ, ಅನುಸರಣಾ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಸ್ಪಂದಿಸಿ ಇತ್ಯರ್ಥಗೊಳಿಸಿ, ಅನುಸರಣಾ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸುದ್ದ ಅವರು, ದೌರ್ಜನ್ಯ ಪ್ರಕರಣಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ತಡೆ ಜಾಗೃತಿಗಾಗಿ ಪೊಲೀಸ್, ಕಂದಾಯ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ದಾಖಲಾದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಕ್ಕೆ ಕ್ರಮ ವಹಿಸಬೇಕು. ಪಜಾ, ಪರಿಶಿಷ್ಟ ವರ್ಗ ಜನಾಂಗಗಳಿಗೆ ಸರ್ಕಾರದಿಂದ ದೊರೆಯುವ ಸಹಾಯ, ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು. ಇಲಾಖೆಗಳಲ್ಲಿ ಮೀಸಲಿರುವ ಅನುದಾನದ ಸದ್ಬಳಕೆ ಮಾಡಿಕೊಂಡು ನಿಗದಿತ ಅವಧಿಯಲ್ಲಿ ಸಹಾಯ-ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಸೂಚಿಸಿದರು.

ಪ್ರಸಕ್ತ ವರ್ಷದಲ್ಲಿ 46 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರಧನ ಮಂಜೂರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ವಿವಿಧ ಸದಸ್ಯರು, ಸರ್ಕಾರಿ ಅಭಿಯೋಜಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.