ರೋಗದ ಕುರಿತು ಸರಿಯಾದ ಮಾಹಿತಿ ತಿಳಿದುಕೊಂಡಲ್ಲಿ ಎಚ್ಐವಿ ಸೋಂಕು ಕಡಿಮೆ ಮಾಡಬಹುದು. ಎಚ್ಐವಿ ಸೋಂಕಿತರನ್ನು ಗೌರವದಿಂದ ಕಾಣಬೇಕು

ಯಲಬುರ್ಗಾ: ಎಚ್‌ಐವಿ ಸೋಂಕು ಮಾರಕ ಕಾಯಿಲೆಯಾಗಿದ್ದು, ಅದನ್ನು ತಡೆಗಟ್ಟಲು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜೆ. ರಂಗಸ್ವಾಮಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ, ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಕಾನೂನು ಸೇವಾ ಸಮಿತಿ, ನರ್ಸಿಂಗ್ ಕಾಲೇಜು, ಸ್ನೇಹಾ ಮಹಿಳಾ ಸಂಘ, ಇನ್ನರ್ ವೀಲ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ರೋಗದ ಕುರಿತು ಸರಿಯಾದ ಮಾಹಿತಿ ತಿಳಿದುಕೊಂಡಲ್ಲಿ ಎಚ್ಐವಿ ಸೋಂಕು ಕಡಿಮೆ ಮಾಡಬಹುದು. ಎಚ್ಐವಿ ಸೋಂಕಿತರನ್ನು ಗೌರವದಿಂದ ಕಾಣಬೇಕು ಎಂದರು.

ಟಿಎಚ್‌ಒ ನೇತ್ರಾವತಿ ಹಿರೇಮಠ ಮಾತನಾಡಿ, ಏಡ್ಸ್ ರೋಗ ನಿಯಂತ್ರಿಸಲು ಸಾಧ್ಯವಿದ್ದು, ಪ್ರತಿಯೊಬ್ಬರಿಗೂ ಇದರ ಬಗ್ಗೆ ತಿಳಿವಳಿಕೆ ಅಗತ್ಯ ಎಂದರು.

ಸಿವಿಲ್ ನ್ಯಾಯಾಧೀಶ ಸಂಜುಕುಮಾರ್ ಪಚ್ಚೆಪುರೆ ಮಾತನಾಡಿದರು. ಸಪ್ರ ದರ್ಜೆ ಕಾಲೇಜು ಪ್ರಾಚಾರ್ಯ ಕೆ.ಎಚ್. ಛತ್ರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣದ ಕನಕದಾಸ ವೃತ್ತದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುವರೆಗೆ ಪ್ರಮುಖ ಬೀದಿಗಳ ಮೂಲಕ ಜಾಗೃತಿ ಜಾಥಾ ನಡೆಯಿತು.

ಈ ಸಂದರ್ಭ ವಕೀಲರ ಸಂಘದ ತಾಲೂಕಾಧ್ಯಕ್ಷ ಎಸ್.ಎಸ್. ಹೊಂಬಳ, ಮುಖ್ಯ ವೈದ್ಯಾಧಿಕಾರಿ ಕೃಷ್ಣ ಹೊಟ್ಟಿ, ಟಿಎಚ್ಒ ನೇತ್ರಾವತಿ ಹಿರೇಮಠ, ವೈದ್ಯ ವಿವೇಕ್ ವಾಗಲೆ, ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಚಾರ್ಯ ಎಚ್‌.ಬಿ. ರಾಮದುರ್ಗ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ್, ಸಹಾಯಕ ಸರ್ಕಾರಿ ಅಭಿಯೋಜಕಿ ಗೀತಾ ಅಸೂಟಿ, ರವಿ ಹುಣಸಿಮರದ, ವಕೀಲರ ಸಂಘದ ಕಾರ್ಯದರ್ಶಿ ಮಹಾಂತೇಶ ಈಟಿ, ಶರಣಮ್ಮ ಪೂಜಾರ, ಶಕುಂತಲಾದೇವಿ ಮಾಲಿಪಾಟೀಲ್, ಚನ್ನಮ್ಮ ಪಾಟೀಲ್, ಶಂಕರಯ್ಯ ಪುರಾಣಿಕಮಠ, ಕಾಳಪ್ಪ ಬಡಿಗೇರ್, ವಂಶಿಕೃಷ್ಣ, ಸೈಯದ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಇತರರು ಇದ್ದರು.