ಸಾರ್ವಜನಿಕರ ಅರ್ಜಿಗಳನ್ನು ಸೂಕ್ತವಾಗಿ ವಿಲೇವಾರಿಗೊಳಿಸಿ: ಡೀಸಿ

| Published : Feb 29 2024, 02:00 AM IST

ಸಾರ್ವಜನಿಕರ ಅರ್ಜಿಗಳನ್ನು ಸೂಕ್ತವಾಗಿ ವಿಲೇವಾರಿಗೊಳಿಸಿ: ಡೀಸಿ
Share this Article
  • FB
  • TW
  • Linkdin
  • Email

ಸಾರಾಂಶ

ಸಾರ್ವಜನಿಕರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸದೇ ನಿಗದಿತ ಸಮಯದಲ್ಲಿ ಪಾರದರ್ಶಕವಾಗಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಸಾರ್ವಜನಿಕರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸದೇ ನಿಗದಿತ ಸಮಯದಲ್ಲಿ ಪಾರದರ್ಶಕವಾಗಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಕುಂದು ಕೊರತೆ ಕುರಿತು ಅರ್ಜಿಗಳನ್ನು ಸ್ವೀಕರಿಸಿ, ಕೆಲವು ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಭೇಟಿ ವೇಳೆ ಹಲವರು ತಮ್ಮ ಸಮಸ್ಯೆಗಳ ಬಗ್ಗೆ ಅವರ ಗಮನ ಸೆಳೆದರು. ಸ್ಥಳದಲ್ಲಿದ್ದ ತಹಸೀಲ್ದಾರ್ ಕೆ.ಎನ್.ಲೋಕೇಶ್ ಸೇರಿ ತಾಲೂಕು ಕಚೇರಿ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದೇ ನಿಗಧಿತ ಸಮಯದಲ್ಲಿ ಪಾರದರ್ಶಕವಾಗಿ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.

ನಂತರ ಅವರು ತಾಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಭೇಟಿ ನೀಡಿ, ಕಡತಗಳನ್ನು ತ್ವರಿತಗತಿವಾಗಿ ವಿಲೇವಾರಿ ಮಾಡುವಂತೆ ಹೇಳಿ, ಟಫಾಲ್ ವಿಭಾಗ ಮತ್ತು ದಾಖಲಾತಿ ವಿಭಾಗದಲ್ಲಿ ಶಿಸ್ತಿನಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು. ಚುನಾವಣಾ ಕಚೇರಿಗೆ ತೆರಳಿ ಮತದಾರ ಪಟ್ಟಿಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಪಟ್ಟಣದ ಅನಿತಾ ಕಾನ್ವೆಂಟ್ ಸೇರಿ ವಿವಿಧ ಶಾಲೆಗಳ ಮತಗಟ್ಟೆಗಳಿಗೆ ಭೇಟಿ ನೀಡಿದ ಅವರು, ಮೂಲ ಸೌಕರ್ಯಗಳು ಹಾಗೂ ಚುನಾವಣಾ ಆಯೋಗ ನೀಡಿರುವ ನಿರ್ದೇಶನದಂತೆ ಅಧಿಕಾರಿಗಳು ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ತಹಸೀಲ್ದಾರ್ ಕೆ.ಎನ್.ಲೋಕೇಶ್ ಇದ್ದರು.