ಸುಂಟಿಕೊಪ್ಪ: ಪ್ರವಾದಿ ಜನ್ಮದಿನಾಚರಣೆ, ವಿದ್ಯುತ್ ದೀಪ ಅಲಂಕಾರ

| Published : Aug 31 2025, 02:00 AM IST

ಸಾರಾಂಶ

ಸುಂಟಿಕೊಪ್ಪ ಪಟ್ಟಣದಲ್ಲಿರುವ ಮಸೀದಿಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕಾರಗೊಳಿಸಲಾಗಿದೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಸುಂಟಿಕೊಪ್ಪ ಪಟ್ಟಣದಲ್ಲಿರುವ ಮಸೀದಿಗಳನ್ನು ಪ್ರವಾದಿ ಮಹಮ್ಮದ್ ಪೈಗಂಬರರ ಜನ್ಮದಿನಾಚರಣೆಯ ಅಂಗವಾಗಿ ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗಿದೆ. ಸುಂಟಿಕೊಪ್ಪ ಪಟ್ಟಣದಲ್ಲಿ ಹಬ್ಬದ ವಾತಾವರಣಕ್ಕೆ ಮುನ್ನಡಿ ಇರಿಸುತ್ತಿರುವಂತೆ ಈಗಾಗಲೇ ದೇವಸ್ಥಾನ ಹಾಗೂ ಮಸೀದಿಗಳನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಿದ್ದು ಪಟ್ಟಣದಲ್ಲಿ ಹಬ್ಬದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಮುಸ್ಲಿಂ ಬಾಂಧವರು ಮಹಮ್ಮದ್ ಪೈಗಂಬರರ ಜನ್ಮ ದಿನಾಚರಣೆಯ ಅಂಗವಾಗಿ ಈದ್ ಮಿಲಾದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲು ಮಸೀದಿಗಳನ್ನು ವಿದ್ಯುತ್ ದೀಪಗಳಿಂದ ಸಜ್ಜುಗೊಳಿಸಿದ್ದಾರೆ.