ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಬೋಧಕ ಆಸ್ಪತ್ರೆಯಲ್ಲಿ ಎಂಆರ್‌ಐ ಯಂತ್ರವನ್ನು ಅಳವಡಿಸಿದ್ದು, ಟೆಲಿರೇಡಿಯಾಲಜಿ ಮೂಲಕ ಎಕ್ಸ್-ರೇ, ಸಿಟಿ ಹಾಗೂ ಎಂಆರ್‌ಐ ವರದಿಗಳನ್ನು ನೀಡಲಾಗುತ್ತಿದೆ. ಕಾಲೇಜಿನಲ್ಲಿ ಪ್ರಸ್ತುತ ಇರುವ ವಿದ್ಯಾರ್ಥಿಗಳ ಸೇರ್ಪಡೆ ಸಂಖ್ಯೆಯನ್ನು 200ಕ್ಕೆ ಉನ್ನತಿಕರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರೊಂದಿಗೆ ಎಂಎಸ್ಸಿ ನರ್ಸಿಂಗ್ ಆರಂಭಿಸಲು ರಾಜೀವ್‌ಗಾಂಧಿ ವಿಶ್ವವಿದ್ಯಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹೇಳಿದ್ದಾರೆ.ಕೊಡಗು ಜಿಲ್ಲಾಡಳಿತದಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವವನ್ನು ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಬಹುದಿನಗಳ ಬೇಡಿಕೆಯಾಗಿದ್ದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಇರುವ 450 ಬೆಡ್ ಆಸ್ಪತ್ರೆಯ ಬಾಕಿ ಉಳಿದ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚುವರಿ ಹಣ ಬಿಡುಗಡೆಗೆ ತೀರ್ಮಾನಿಸಿದೆ. ಮಡಿಕೇರಿ ಜಿಲ್ಲಾಸ್ಪತ್ರೆಯ ಬಾಕಿ ಉಳಿದ ಅಭಿವೃದ್ಧಿ ಕಾಮಗಾರಿಗಳಿಗೆ 78.10 ಕೋಟಿ ರೂಪಾಯಿ ಬಿಡುಗಡೆಗೆ ಒಪ್ಪಿಗೆ ನೀಡಿದೆ ಎಂದೂ ಉಸ್ತುವಾರಿ ಸಚಿವರು ಮಾಹಿತಿ ನೀಡಿದರು.2024ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಪೊಲೀಸರು ಜಿಲ್ಲೆಯಲ್ಲಿ ಯಾವುದೇ ಕಾನೂನು ಸುವ್ಯವಸ್ಥೆಗೆ ಚ್ಯುತಿ ಬಾರದಂತೆ ನೋಡಿಕೊಂಡಿದ್ದಲ್ಲದೆ, ಜಿಲ್ಲೆಯಲ್ಲಿ ವರದಿಯಾದ ಡಕಾಯಿತಿ, ರಾಬರಿ ಹಾಗೂ ಸೊತ್ತು ಕಳವು ಪ್ರಕರಣಗಳಲ್ಲಿ 2024 ನೇ ಸಾಲಿನಲ್ಲಿ ಒಟ್ಟು 120 ಪ್ರಕರಣಗಳನ್ನು ಪತ್ತೆ ಹಚ್ಚಿ, 150 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 1 ಕೋಟಿ 52 ಲಕ್ಷ ರು. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಮಾದಕ ವಸ್ತು ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಒಟ್ಟು 86 ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, 161 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಸುಮಾರು 3 ಕೋಟಿ 12 ಲಕ್ಷ ರು. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಮಾದಕ ವಸ್ತು ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಒಟ್ಟು 86 ಪ್ರಕರಣಗಳನ್ನು ಪತ್ತೆ ಹಚ್ಚಿದ್ದು, 161 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಸುಮಾರು 3 ಕೋಟಿ 12 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದರು.ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಡಿ ಜಿಲ್ಲೆಯಲ್ಲಿ ಗಾಮೀಣ ರಸ್ತೆಗಳ ಅಭಿವೃದ್ಧಿಗೆ ಹಾಗೂ ದುರಸ್ತಿಗೆ ಆದ್ಯತೆ ನೀಡಲಾಗುತ್ತಿದೆ. ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕಾಮಗಾರಿಗಳಿಗೆ ಜಿಲ್ಲೆಗೆ ಒಟ್ಟು 439.93 ಲಕ್ಷ ರುಪಾಯಿ ಹಂಚಿಕೆಯಾಗಿದೆ. ಇದರಲ್ಲಿ 170 ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಎನ್‌ಡಿಆರ್‌ಎಫ್ ಅಡಿಯಲ್ಲಿ 10.43 ಕೋಟಿ ರು. ಹಂಚಿಕೆಯಾಗಿದೆ. ಹಲವಾರು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿದ್ದು ಸಕಾಲದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಪೊಲೀಸ್, ಹೋಂ ಗಾರ್ಡ್, ಅರಣ್ಯ ಇಲಾಖೆ, ಕೊಡಗು ಸೈನಿಕ ಶಾಲೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ತಂಡ, ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಸಿಸಿನ್ಸಿಸಿ ತಂಡ, ಕೊಡಗು ವಿದ್ಯಾಲಯ, ಜನರಲ್ ತಿಮ್ಮಯ್ಯ ಎನ್‌ಸಿಸಿ ತಂಡ, ಸಂತ ಜೋಸೆಫರ ಪ್ರೌಢಶಾಲೆ, ಸಂತ ಮೈಕಲರ ಪ್ರೌಢಶಾಲೆ ಸೇರಿದಂತೆ ವಿವಿಧ ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿ ಗಮನ ಸೆಳೆದವು.ಬಾಲಕರ ಬಾಲ ಮಂದಿರ, ಕೇಂದ್ರೀಯ ವಿದ್ಯಾಲಯ, ಮಡಿಕೇರಿ, ಬಾಲಕಿಯರ ಬಾಲ ಮಂದಿರ, ಸಂತ ಜೋಸೆಫರ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಗಿರಿಜನ ಆಶ್ರಮ ಶಾಲೆ, ನಿಟ್ಟೂರು, ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮಡಿಕೇರಿ, ಸಂತ ಮೈಕಲರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಕೂಡಿಗೆ ಸೈನಿಕ ಶಾಲೆಯ ವಿದ್ಯಾರ್ಥಿಗಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪ್ರೊಬೆಷನರಿ ಐಪಿಎಸ್ ಅಧಿಕಾರಿ ಬೆನಕ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.