ಸಾರಾಂಶ
ವೇಶ್ಯಾವಾಟಿಕೆ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಅನಗೋಳದ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಕೇಂದ್ರದ ಮೇಲೆ ಶುಕ್ರವಾರ ಸಿಇಎನ್ ಪೊಲೀಸರು ದಾಳಿ ನಡೆಸಿ, 6 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ವೇಶ್ಯಾವಾಟಿಕೆ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಅನಗೋಳದ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಕೇಂದ್ರದ ಮೇಲೆ ಶುಕ್ರವಾರ ಸಿಇಎನ್ ಪೊಲೀಸರು ದಾಳಿ ನಡೆಸಿ, 6 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.ಅನಗೋಳದ ಮುಖ್ಯ ರಸ್ತೆಯಲ್ಲಿ ರುವ ಅಂಜಲಿ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮೇಲೆ ದಾಳಿ ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಬೆಳಗಾವಿಯ ಸಿಇಎನ್ ಠಾಣೆಯ ಪಿಐ ಬಿ.ಆರ್. ಗಡ್ಡೇಕರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಈ ದಾಳಿ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 6 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಅಲ್ಲದೆ ಈ ವೇಶ್ಯಾವಾಟಿಕೆ ಚಟುವಟಿಕೆಯಲ್ಲಿ ಜಿಲ್ಲೆಯ ಸಂಕೇಶ್ವರ ಹಾಗೂ ಕಾಕತಿಯ ಮಹಿಳೆ ಸೇರಿ ಅನಗೋಳದ ನಾಲ್ವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಪಾರ್ಲರ್ ಮಾಲಕಿ ಅಂಜಲಿ ಸಂಜಯ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.