ಕನ್ನಡಪ್ರಭ ವಾರ್ತೆ ಬೆಳಗಾವಿ ಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಗರದ ಆರ್‌ಪಿಡಿ ಕ್ರಾಸ್‌ನಲ್ಲಿರುವ ಡಿವೈನ್ ಸಲೂನ್ ಆ್ಯಂಡ್ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಹೊರರಾಜ್ಯದ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಗರದ ಆರ್‌ಪಿಡಿ ಕ್ರಾಸ್‌ನಲ್ಲಿರುವ ಡಿವೈನ್ ಸಲೂನ್ ಆ್ಯಂಡ್ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಹೊರರಾಜ್ಯದ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ಸಿಸಿಬಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ ನಾಯಕ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ದಾಳಿಯ ವೇಳೆ ಗುಜರಾತ್ ಹಾಗೂ ಮುಂಬೈ ಸೇರಿದಂತೆ ಹೊರರಾಜ್ಯಗಳ ಮೂಲದ ನಾಲ್ವರು ಯುವತಿಯರು ಪತ್ತೆಯಾಗಿದ್ದು, ಅವರನ್ನು ಪೊಲೀಸರು ರಕ್ಷಿಸಿದ್ದಾರೆ.

ಯುವತಿಯರನ್ನು ಬಳಸಿಕೊಂಡು ಸ್ಪಾ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸ್ಪಾ ಮಾಲೀಕ ಹಾಗೂ ವ್ಯವಸ್ಥಾಪಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಮುಂದಿನ ತನಿಖೆಗಾಗಿ ವಶಕ್ಕೆ ಪಡೆದ ಆರೋಪಿಗಳು ಹಾಗೂ ಸಂಬಂಧಿತ ದಾಖಲೆಗಳನ್ನು ಟಿಳಕವಾಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.