ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನಾಚರಣೆ ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಮಹಾನ್ ಧೀಮಂತ ನಾಯಕ. ಎಲ್ಲ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಿ ಭಾರತವನ್ನು ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯಲು ಶ್ರಮಿಸಿದರು. ನಾವು ಅವರ ತತ್ವಾದರ್ಶ, ಸಿದ್ಧಾಂತವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಂವಿಧಾನ ಆಶಯಗಳನ್ನು ರಕ್ಷಿಸಬೇಕು ಎಂದು ಹೇಳಿದರು.
ಈ ಸಂದರ್ಭ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮುಂಚೂಣಿ ಘಟಕಾಧ್ಯಕ್ಷರಾದ ಇಬ್ರಾಹೀಂ ನವಾಝ್, ಎಸ್.ಅಪ್ಪಿ, ಡಿಸಿಸಿ ಉಪಾಧ್ಯಕ್ಷರಾದ ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಡೆನ್ನಿಸ್ ಡಿಸಿಲ್ವ, ಮುಖಂಡರಾದ ಕೆ.ಪಿ.ಥೋಮಸ್, ಶಬೀರ್ ಸಿದ್ದಕಟ್ಟೆ, ವಿಕಾಸ್ ಶೆಟ್ಟಿ, ಜೀತೇಂದ್ರ ಸುವರ್ಣ, ಸಬಿತಾ ಮಿಸ್ಕಿತ್, ಆಲ್ವೇನ್ ಪ್ರಕಾಶ್, ಹೈದರ್ ಬೋಳಾರ್, ಸಮರ್ಥ್ ಭಟ್, ನೆಲ್ಸನ್, ಕೇಶವಮಾರೋಲಿ, ಟಿ. ಟಿ. ಗಣೇಶ್, ಪ್ರಶಾಂತ್ ಅಮೀನ್, ಜೋರ್ಜ್, ಜಮಾಲ್ ಸುಳ್ಯ, ನಝೀರ್ ಬಜಾಲ್ ಮತ್ತಿತರರು ಇದ್ದರು.ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕಾಧ್ಯಕ್ಷ ದಿನೇಶ್ ಮುಳೂರು ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಸಫಾಯಿ ಕರ್ಮಾಚಾರಿ ಘಟಕಾಧ್ಯಕ್ಷ ಪ್ರೇಮ್ ನಾಥ್ ಬಳ್ಳಾಲ್‌ಬಾಗ್ ಸ್ವಾಗತಿಸಿದರು. ಡಿಸಿಸಿ ಉಪಾಧ್ಯಕ್ಷ ಟಿ.ಹೊನ್ನಯ್ಯ ವಂದಿಸಿದರು.