ಸಾರಾಂಶ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯವನ್ನು ಖಂಡಿಸಿ, ಭಾರತ ಸರ್ಕಾರವು ಅಲ್ಲಿನ ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿ ಹಾಗೂ ಧರ್ಮ ಪ್ರೇಮಿಗಳು, ಹಿಂದುತ್ವ ನಿಷ್ಠರು ಗುರುವಾರ ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ ಶಾಂತಿಯುತವಾಗಿ ಪ್ಲೇ ಕಾರ್ಡ್ ಹಿಡಿದು ಮೌನ ಪ್ರತಿಭಟನೆ ಮಾಡಿದರು.
ಕನ್ನಡಪ್ರಭ ವಾರ್ತೆ ಕಾರ್ಕಳಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯವನ್ನು ಖಂಡಿಸಿ, ಭಾರತ ಸರ್ಕಾರವು ಅಲ್ಲಿನ ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿ ಹಾಗೂ ಧರ್ಮ ಪ್ರೇಮಿಗಳು, ಹಿಂದುತ್ವ ನಿಷ್ಠರು ಗುರುವಾರ ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ ಶಾಂತಿಯುತವಾಗಿ ಪ್ಲೇ ಕಾರ್ಡ್ ಹಿಡಿದು ಮೌನ ಪ್ರತಿಭಟನೆ ಮಾಡಿದರು.
ಕಳೆದ ಅನೇಕ ವರ್ಷಗಳಿಂದ ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಅತ್ಯಂತ ಅಮಾನವೀಯವಾಗಿ ಆಕ್ರಮಣಗಳಾಗುತ್ತಿವೆ. ಹಿಂದೂಗಳನ್ನು ಅತ್ಯಂತ ಬರ್ಬರವಾಗಿ ಹತ್ಯೆ ಮಾಡುವುದು, ಹಿಂದೂ ಸ್ತ್ರೀಯರ ಮೇಲೆ ಅತ್ಯಾಚಾರ ಮಾಡುವುದು, ಹಿಂದೂಗಳ ಆಸ್ತಿಯನ್ನು ವಶಪಡಿಸಿಕೊಳ್ಳುವುದು ನಿರಂತರ ನಡೆಯುತ್ತಿದೆ. ಅನೇಕ ದೇಶಗಳಲ್ಲಿ ಅತ್ಯಂತ ಶಾಂತಿಯುತವಾಗಿ ಅಧ್ಯಾತ್ಮ ಪ್ರಸಾರ ಮಾಡುತ್ತಿರುವ ಇಸ್ಕಾನ್ ಸಂಸ್ಥೆಯ ಮೇಲೆಯೂ ಅಲ್ಲಿ ಅಕ್ರಮಣವನ್ನು ನಡೆಸಿ, ಅದರ ಪ್ರಮುಖರ ಮೇಲೆ ದಾಳಿ ಮಾಡಿ, ಅವರನ್ನು ಅಕ್ರಮವಾಗಿ ಬಂಧಿಸುವಂತಹ ಅಮಾನವೀಯ ಕೃತ್ಯಗಳು ನಡೆದಿವೆ. ಇದರ ಬಗ್ಗೆ ವಿಶ್ವಾದ್ಯಂತ ತುಂಬಾ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಅಲ್ಲಿನ ಹಿಂದುಗಳ ರಕ್ಷಣೆಗೆ ತಕ್ಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.