ಕನ್ನಡಪ್ರಭ ವಾರ್ತೆ ಅಥಣಿ ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಪುರಸಭೆ ಆಡಳಿತ ಅವರ ಬೇಕು ಬೇಡಿಕೆಗಳಿಗೆ ಮತ್ತು ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಯುವ ಮುಖಂಡ ಚಿದಾನಂದ ಸವದಿ ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ಅಥಣಿ
ಬೀದಿ ಬದಿ ವ್ಯಾಪಾರಿಗಳು ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಪುರಸಭೆ ಆಡಳಿತ ಅವರ ಬೇಕು ಬೇಡಿಕೆಗಳಿಗೆ ಮತ್ತು ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಯುವ ಮುಖಂಡ ಚಿದಾನಂದ ಸವದಿ ಸಲಹೆ ನೀಡಿದರು.ಅವರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬೀದಿ ಬದಿ ವ್ಯಾಪಾರಸ್ಥರ ದಿನಾಚರಣೆಯಲ್ಲಿ ಭಾಗವಹಿಸಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬೀದಿ ಬದಿ ವ್ಯಾಪಾರಸ್ಥರನ್ನು ಉದ್ದೇಶಿಸಿ ಮಾತನಾಡಿರು. ಬೀದಿ ಬದಿ ವ್ಯಾಪಾರ ಸಮಾಜದ ಮತ್ತು ವ್ಯವಸ್ಥೆಯ ಒಂದು ಭಾಗ, ಮಳೆ, ಚಳಿ, ಬಿಸಿಲು ಎನ್ನದೇ ದುಡಿದು ಎಂತಹ ಕಠಿಣ ಪರಿಸ್ಥಿತಿಯಲ್ಲೂ ಪ್ರಾಮಾಣಿಕವಾಗಿ ದುಡಿಯುವ ಇವರ ಹಿತರಕ್ಷಣೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಮಾನತೆಯ ಆಶಯ ಹಾಗೂ ಡಾ. ಮನಮೋಹನ್ ಸಿಂಗ್ ಅವರು ಜಾರಿಗೆ ತಂದ ಆರ್ಥಿಕ ನೀತಿಗಳು ಇಂದು ಸಾಮಾನ್ಯ ವ್ಯಾಪಾರಿಗಳಿಗೂ ಶಕ್ತಿ ತುಂಬಿವೆ. ಬೀದಿಬದಿ ವ್ಯಾಪಾರಿಗಳ ಸಂಘಟಿತ ಹೋರಾಟದಿಂದ ದೇಶದಲ್ಲಿ ಕಾನೂನು ಮತ್ತು ನೀತಿ ಜಾರಿಗೆ ಬಂದಿದೆ. ಈ ಕಾನೂನು ಜಾರಿಗೆ ಬಂದಿರುವುದರಿಂದ ಬೀದಿಬದಿ ವ್ಯಾಪಾರಿಗಳು ಘನತೆಯಿಂದ ಬದುಕುತ್ತಿದ್ದಾರೆ. ಅಥಣಿ ಪಟ್ಟಣದ ವ್ಯಾಪಾರಿಗಳ ಅಭಿವೃದ್ಧಿ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಾವು ಸದಾ ಬದ್ಧರಾಗಿದ್ದೇವೆ ಎಂದು ಹೇಳಿದರು.ಬೀದಿ ಬದಿ ವ್ಯಾಪಾರಸ್ಥರ ತಾಲೂಕಾಧ್ಯಕ್ಷ ಮನ್ಸೂರ್ ಬಾಗವಾನ ಮಾತನಾಡಿ, ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಹಕ್ಕುಗಳ ರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ ಜಾರಿಗೆ ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಸ್ಮರಿಸಬೇಕಾಗುತ್ತದೆ. ನಮ್ಮೆಲ್ಲರ ಹಿತ ಕಾಪಾಡುವ ಮೂಲಕ ಶಾಸಕ ಲಕ್ಷ್ಮಣ ಸವದಿ ಅವರು ನೂರಾರು ಬೀದಿ ಬದಿ ವ್ಯಾಪಾರಸ್ಥರಿಗೆ ಬಿಸಿಲು ಮಳೆಯಿಂದ ರಕ್ಷಣೆ ಮಾಡಿಕೊಳ್ಳಲು ಛತ್ರಿ ಕೊಡುವ ಮೂಲಕ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಸರ್ಕಾರದಿಂದ ಹಾಗೂ ಪುರಸಭೆಯಿಂದ ಸವಲತ್ತುಗಳನ್ನು ನಮಗೆ ಒದಗಿಸಬೇಕು ಎಂದು ಮನವಿ ಮಾಡಿದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್. ಅಧ್ಯಕ್ಷೆ ಶಿವಲೀಲಾ ಬುಟಾಳಿ, ಉಪಾಧ್ಯಕ್ಷೆ ಭುವನೇಶ್ವರಿ ಯಕಂಚಿ ಇತರರು ಮಾತನಾಡಿದರು. ಇದೇ ವೇಳೆ ವ್ಯಾಪಾರಸ್ಥರಿಗೆ ಪುರಸಭೆಯಿಂದ ಮಾರಾಟಗಾರರ ಪ್ರಮಾಣ ಪತ್ರ ವಿತರರಿಸಲಾಯಿತು. ಬೀದಿ ಬದಿ ವ್ಯಾಪಾರಸ್ಥರಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.ಪುರಸಭೆ ಸದಸ್ಯರಾದ ರಾಜು ಗುಡೋಡಗಿ, ಮಲ್ಲೇಶ ಹುದ್ದಾರ್, ಮಲ್ಲಿಕಾರ್ಜುನ ಬುಟಾಳಿ, ಮುಖಂಡರಾದ ಆಸೀಫ್ ತಾಂಬೋಳಿ, ಬಸವರಾಜ ಹಳದಮಳ್ಳ, ಬೀರಪ್ಪ ಯಂಕಂಚಿ, ಸಿದ್ಧಲಿಂಗ ಮಡ್ಡಿ, ಇನ್ನೂಸ್ ಬಾಗವಾನ, ಗುಲಾಬ ಘಟಕಾಂಬಳೆ, ಹಜರತ್ ಜಮಾದಾರ, ಮಾನಿಂಗ ಭಜಂತ್ರಿ, ಶ್ರೀನಿವಾಸ ಶೆಟ್ಟಿ, ಬಸವಂತ ಮಾಂಗ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.