ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ಸಹಕಾರಿ ಕ್ಷೇತ್ರ ಹಾಗೂ ರೈತರ ನಡುವಿನ ಸಂಬಂಧ ತಾಯಿ-ಮಗುವಿನಂತೆ. ಈ ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವಂತೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸಲಹೆ ನೀಡಿದರು.ತಾಲೂಕಿ ಚಿನಕುರಳಿ ಗ್ರಾಮದಲ್ಲಿ ನಡೆದ 72ನೇ ಸಹಕಾರ ಸಪ್ತಾಹದಲ್ಲಿ ವಸ್ತು ಪ್ರದರ್ಶನದ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿ, ಎಲ್ಲಾ ಸಹಕಾರಿ ಕ್ಷೇತ್ರದ ಪ್ರತಿನಿಧಿಗಳು ಸಹಕಾರ ಸಂಘಗಳಲ್ಲಿ ನಡೆಯುವ ಅವ್ಯವಹಾರಗಳನ್ನು ಬಗ್ಗೆ ಪ್ರಶ್ನಿಸಿ ತಡೆಗಟ್ಟುವ ಕೆಲಸ ಮಾಡಬೇಕು ಎಂದರು.
ಅಧಿಕಾರಿಗಳು ಸಹ ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಒಳಗಾಗದೆ ಪಾರದರ್ಶಕವಾಗಿ ಕೆಲಸ ಮಾಡುವ ಮೂಲಕ ಸಂಘಗಳನ್ನು ಅಭಿವೃದ್ಧಿಪಡಿಸಬೇಕು ಎಂದರು.ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ರೈತರನ್ನು ಆರ್ಥಿಕವಾಗಿ ಮೇಲೆತ್ತುವ ಉದ್ದೇಶದಿಂದ ಆರಂಭಗೊಂಡ ಸಹಕಾರ ಸಂಘಗಳು ರೈತರ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು. ಅಧಿಕ ಲಾಭಗಳಿಸಿ ಬರುವ ಆದಾಯವನ್ನು ರೈತರಿಗೆ ವಿತರಣೆ ಮಾಡಬೇಕು ಎಂದರು.ತಾಲೂಕಿನ ಭತ್ತ ಕಟಾವಿಗೆ ಬಂದಿದ್ದು, ಕೇವಲ 2 ಸಾವಿರ ರು.ಗೆ ದಲ್ಲಾಳಿಗಳ ಪಾಲಾಗುತ್ತಿದೆ. ಶಾಸಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಶೀಘ್ರ ಭತ್ತ ಖರೀದಿ ಕೇಂದ್ರ ಆರಂಭಿಸಲು ಸೂಕ್ತ ಕ್ರಮ ಕೈಗೊಂಡು ರೈತರನ್ನು ಸಂಕಷ್ಟದಿಂದ ದೂರ ಮಾಡಬೇಕು ಎಂದು ರೈತ ಮುಖಂಡ ಅರಳಕುಪ್ಪೆ ಮಹದೇವು ಒತ್ತಾಯಿಸಿದರು.
ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವನಜಾಕ್ಷಿ ಮಾತನಾಡಿ, ಸಹಕಾರ ತತ್ವವನ್ನು ಪ್ರಚಾರ ಮಾಡಲು, ಸದಸ್ಯೆ, ಸವಾಲುಗಳ ಬಗ್ಗೆ ಚಿಂತನ ಮಂಥನ ನಡೆಸಲು ಪ್ರತಿ ವರ್ಷ ಸಹಕಾರ ಸಪ್ತಾಹ ನಡೆಸಲಾಗುತ್ತಿದೆ ಎಂದರು.ಇದೇ ವೇಳೆ ಹಿರಿಯ ಸಹಕಾರಿಗಳಾದ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಗುರುಸ್ವಾಮಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಟಿಎಪಿಸಿಎಂಎಸ್ ನಿರ್ದೇಶಕ ವಿ.ಎಸ್.ನಿಂಗೇಗೌಡ, ಚಿನಕುರಳಿ ಸೊಸೈಟಿ ಕಾರ್ಯದರ್ಶಿ ಪುಟ್ಟೇಗೌಡ ಅವರನ್ನು ಅಭಿನಂದಿಸಲಾಯಿತು.
ಇದಕ್ಕೂ ಮೊದಲು ಸೊಸೈಟಿ ಅಧ್ಯಕ್ಷ ಸಿ.ಎಸ್.ಗೋಪಾಲಗೌಡ ಹಾಗೂ ಡೇರಿ ಅಧ್ಯಕ್ಷ, ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಹಿಳೆಯರ ಪೂರ್ಣಕುಂಭ ಹಾಗೂ ಜೋಡೆತ್ತುಗಳ ಮೆರವಣಿಗೆ ನಡೆಸಿ ಗಮನ ಸೆಳೆದರು. ಮನ್ಮುಲ್ ಒಕ್ಕೂಟದಿಂದ ದೊರೆಯುವ ಸೌಲಭ್ಯ, ಪಶು ಆಹಾರ ಮತ್ತು ಸಿಹಿ ತಿಂಡಿಗಳ ವಸ್ತು ಪ್ರದರ್ಶನ ನಡೆಯಿತು.ಕಾರ್ಯಕ್ರಮದಲ್ಲಿ ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್, ಸೊಸೈಟಿ ಅಧ್ಯಕ್ಷ ಸಿ.ಎಸ್.ಗೋಪಾಲಗೌಡ, ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿರ್ದೇಶಕ ಎಸ್.ಎಲ್.ಮೋಹನ್, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಡಾ.ಕೆಂಪೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಸಿ.ಪುಟ್ಟಸ್ವಾಮಿಗೌಡ, ಎ.ವಿಜೇಂದ್ರಮೂರ್ತಿ, ಮನ್ಮುಲ್ ವಿಶೇಷಾಧಿಕಾರಿ ಕೆ.ಅನಿತಾ, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಗಿರೀಶ್, ಉಪಾಧ್ಯಕ್ಷೆ ಪ್ರೇಮಪುಟ್ಟೇಗೌಡ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚಲುವೇಗೌಡ, ಮನ್ಮುಲ್ ನೌಕರರ ಯೂನಿಯನ್ ಅಧ್ಯಕ್ಷ ಜಿ.ಕೆ.ಶಿವಕುಮಾರ್, ಶಿವಪ್ಪ, ವ್ಯವಸ್ಥಾಪಕ ಡಾ.ಪಿ.ಆರ್.ಮಂಜೇಶ್, ಡಾ.ಅಕಲಪ್ಪರೆಡ್ಡಿ, ಆರ್.ನಿರ್ಮಲ, ಉಪ ವ್ಯವಸ್ಥಾಪಕ ಆರ್.ಪ್ರಸಾದ್ ಸೇರಿದಂತೆ ಹಲವರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))