ಶಿಗ್ಗಾಂವಿ: ಕನ್ನಡದ ನೆಲ, ಜಲ, ಭಾಷೆ, ಸಾಹಿತ್ಯ, ಜನಪದ, ಸಂಸ್ಕೃತಿಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಮಹದಾಸೆಯೊಂದಿಗೆ ಮೈಸೂರು ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಅವರು ಸ್ಥಾಪಿಸಿದ ಕನ್ನಡ ಸಾಹಿತ್ಯ ಪರಿಷತ್ತು ಇಂದು ಸರ್ವರನ್ನು ಒಳಗೊಂಡು, ಸರ್ವರ ಒಳತಿಗಾಗಿ, ಸರ್ವರ ಶ್ರೇಯೋಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಾ ವಸುದೇವ ಕುಟುಂಬಕಂ ಎಂಬ ಸಂದೇಶವನ್ನು ಸಾರುತ್ತಿರುವುದು ಸಂತೋಷದ ವಿಷಯ ಎಂದು ಕನ್ನಡರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವಾನಂದ ಮ್ಯಾಗೇರಿ ಹೇಳಿದರು.ತಾಲೂಕಿನ ಗಂಜಿಗಟ್ಟಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಗಪ್ಪ ಬೆಂತೂರ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ೧೧೧ ವರ್ಷಗಳ ಸಂಭ್ರಮ, ಕನ್ನಡ ನಾಡು, ನುಡಿ, ಸಂಸ್ಕೃತಿಗಳ ರಕ್ಷಣೆಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ ಅವರು ವಿಶೇಷ ಕಾಳಜಿ ವಹಿಸಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಷತ್ ಸ್ಥಾಪನೆಗೊಳ್ಳಲು ಪ್ರಮುಖ ಕಾರಣರು. ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತಾಗಬೇಕೆಂದು ಕನಸು ಕಂಡದ್ದು ಅಕ್ಷರ ಸಹ ಅದು ಇಂದು ನನಸಾಗಿದೆ. ಪರಿಷತ್ತಿನ ಸೇವೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಒಡೆಯರ ಅವರ ಜೊತೆಗೆ ಸಂಸ್ಥಾನದಲ್ಲಿ ದಿವಾನರಾಗಿದ್ದ ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಸರ್ ಮಿರ್ಜಾ ಇಸ್ಮಾಯಿಲ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಬೆಳವಣಿಗೆಗೆ ಪ್ರಮುಖ ಪಾತ್ರವಹಿಸಿದ್ದಾರೆ ಎಂದರು. ಜೊತೆಗೆ ಪತ್ರಿಕೆಗಳನ್ನು ಕೊಂಡು ಓದುವದು, ಪುಸ್ತಕಗಳನ್ನು ಖರೀದಿಸುವದು ಹಾಗೂ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಮೂಲಕ ಕನ್ನಡ ಹಾಗೂ ಕನ್ನಡ ಬರಹಗಾರರನ್ನು ಪ್ರೋತ್ಸಾಹಿಸಬೇಕಿದೆ ಎಂದರು.ಕನ್ನಡ ಸಾಹಿತ್ಯ ಪರಿಷತ್ತಿನ ಕುರಿತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಗಂಜಿಗಟ್ಟಿಯ ಕಿರಿಯ ತರಬೇತಿ ಅಧಿಕಾರಿ ಶಶಿಕಾಂತ ರಾಠೋಡ ಅವರು ಕನ್ನಡ ಭಾಷೆ ಬೆಳವಣಿಗೆಗೆ ಮತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕಿದೆ ಹಾಗೂ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಯ ಜವಾಬ್ದಾರಿಯನ್ನು ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು ಪ್ರತಿಯೊಬ್ಬ ಪ್ರಜೆಯ ಮನೆ-ಮನವನ್ನು ಮುಟ್ಟುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನ ಸಾಮಾನ್ಯರ ಪರಿಷತ್ತಾಗಿ ಬೆಳೆದಿರುವುದು ಕನ್ನಡಿಗರ ಹೆಮ್ಮೆ ಎಂದರು.ಗಂಜಿಗಟ್ಟಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆಡಳಿತಾಧಿಕಾರಿ ರವಿಕುಮಾರ ಡಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಬಸವರಾಜ ಹೆಸರೂರ, ರಾಘವೇಂದ್ರ ಕೌಜಲಗಿ, ರಮೇಶ ಹರಿಜನ, ಅಶೋಕ ಕಾಳೆ, ಶಂಭು ಕೇರಿ, ಆನಂದಗೌಡ ಹಿರೇಗೌಡರ, ಶಶಾಂಕ ಕೌಜಲಗಿ, ಸುಶೀಲಾ ಗೋಣಿ, ಬಸವರಾಜು, ನಾಗರಾಜ ಭೋವಿ, ಸುಭಾಷ ,ಗುರುಪ್ರಸಾದ, ಗಂಗಮ್ಮ, ಜ್ಯೋತಿ, ಮಕ್ಕಳು, ಸಾಹಿತ್ಯಾಭಿಮಾನಿಗಳು ಉಪಸ್ಥಿತರಿದ್ದರು. ಹೊನ್ನಪ್ಪ ಕರೆಕನ್ನಮ್ಮನವರ ಸ್ವಾಗತಿಸಿದರು. ವಿಶಾಲಾಕ್ಷಿ ಜಾಧವ ನಿರೂಪಿಸಿದರು. ರಾಜು ಕೆಂಬಾವಿ ವಂದಿಸಿದರು.ಕಸಾಪದಿಂದ ಕನ್ನಡದ ನೆಲೆ, ಜಲ ಭಾಷೆ ಸಂರಕ್ಷಣೆ-ಮ್ಯಾಗೇರಿ
ಕನ್ನಡದ ನೆಲ, ಜಲ, ಭಾಷೆ, ಸಾಹಿತ್ಯ, ಜನಪದ, ಸಂಸ್ಕೃತಿಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಮಹದಾಸೆಯೊಂದಿಗೆ ಮೈಸೂರು ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಅವರು ಸ್ಥಾಪಿಸಿದ ಕನ್ನಡ ಸಾಹಿತ್ಯ ಪರಿಷತ್ತು ಇಂದು ಸರ್ವರನ್ನು ಒಳಗೊಂಡು, ಸರ್ವರ ಒಳತಿಗಾಗಿ, ಸರ್ವರ ಶ್ರೇಯೋಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಾ ವಸುದೇವ ಕುಟುಂಬಕಂ ಎಂಬ ಸಂದೇಶವನ್ನು ಸಾರುತ್ತಿರುವುದು ಸಂತೋಷದ ವಿಷಯ ಎಂದು ಕನ್ನಡರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವಾನಂದ ಮ್ಯಾಗೇರಿ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.