ಸಾರಾಂಶ
ಹಾವೇರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಿಷನ್ ವಾತ್ಸಲ್ಯ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-೨೦೧೫, ತಿದ್ದುಪಡಿ ೨೦೨೧ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.
ಕನ್ನಡಪ್ರಭ ವಾರ್ತೆ ಹಾವೇರಿ
ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಬಾಲನ್ಯಾಯ ಕಾಯ್ದೆಗಳನ್ನು ಜಾರಿಗಳಿಸಲು ಕಾಲಕಾಲಕ್ಕೆ ಸರ್ಕಾರ ಸುತ್ತೋಲೆಗಳು ಹಾಗೂ ಮಾರ್ಗಸೂಚಿಗಳು ಜಾರಿಗೆ ತರುತ್ತಿದ್ದು, ಅವುಗಳ ಬಗ್ಗೆ ತಿಳಿದುಕೊಂಡು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪುಟ್ಟರಾಜು ಹೇಳಿದರು.ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಮಿಷನ್ ವಾತ್ಸಲ್ಯ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-೨೦೧೫, ತಿದ್ದುಪಡಿ ೨೦೨೧ ಕುರಿತು ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಾರ್ತಿ ಮಾತನಾಡಿ, ಮಕ್ಕಳ ರಕ್ಷಣೆಗೆ ಇರುವ ಎಲ್ಲಾ ಕಾನೂನುಗಳ ಮಾಹಿತಿ ಪಡೆದುಕೊಂಡು ಮಕ್ಕಳ ರಕ್ಷಣೆಯಲ್ಲಿ ಕ್ರೀಯಾಶೀಲರಾಗಿ ತೊಡಗಿಸಿಕೊಳ್ಳಬೇಕು. ಎಲ್ಲಾ ಇಲಾಖಾ ಎಲ್ಲಾ ಭಾಗೀದಾರರು ಕಾನೂನು ತಿಳುವಳಿಕೆ ಪಡೆದುಕೊಳ್ಳುವುದು ಅವಶ್ಯಕವಾಗಿರುತ್ತದೆ ಎಂದರು.ಬೆಂಗಳೂರು ಪೊಲೀಸ್ ಮಹಾ ನಿರ್ದೇಶಕರ ತರಬೇತಿ ಕಚೇರಿ ಪೊಲೀಸ್ ತರಬೇತಿದಾರ ರೋಹಿತ ಸಿ.ಜಿ. ಉಪನ್ಯಾಸ ನೀಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಚ್. ಎಚ್.ಮಜೀದ ಉಪಸ್ಥಿತರಿದ್ದರು.
ತರಬೇತಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು, ಸರ್ಕಾರಿ ಹಾಗೂ ಸರ್ಕಾರೇತರ ಮಕ್ಕಳ ಪಾಲನಾ ಸಂಸ್ಥೆಗಳ ಸಿಬ್ಬಂದಿಗಳು ಭಾಗವಹಿಸಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.