ಸಾರಾಂಶ
ಮಡಿಕೇರಿ : ಗಾಳಿಬೀಡು ಗ್ರಾಮದ ಕಾಫಿ ತೋಟವೊಂದರಲ್ಲಿ ಕಾಣಿಸಿಕೊಂಡ ಅಂದಾಜು 10 ಅಡಿ ಉದ್ದದ ಹೆಬ್ಬಾವನ್ನು ಉರಗ ತಜ್ಞ ರಕ್ಷಿಸಿದ್ದಾರೆ.
ಗಾಳಿಬೀಡು ಗ್ರಾಮದ ಕರಕರನ ಪವನ್(ಪ್ರಭು) ಅವರ ಕಾಫಿ ತೋಟದಲ್ಲಿ ಕೆಲಸ ಮಾಡುವ ಸಂದರ್ಭ ಹೆಬ್ಬಾವು ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಯದುಕುಮಾರ್ ಕೊಯ್ಯಮುಡಿ ಹೆಬ್ಬಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸುರಕ್ಷಿತವಾಗಿ ಅರಣ್ಯ ಬಿಟ್ಟಿದ್ದಾರೆ.ಈ ಸಂದರ್ಭ ಮಡಿಕೇರಿ ವಲಯ ರೇಂಜ್ ಫಾರೆಸ್ಟರ್ಗಳಾದ ದರ್ಶಿನಿ, ಸಚಿನ್ ಹಾಗೂ ಅರಣ್ಯ ಸಿಬ್ಬಂದಿ ಇದ್ದರು.
-----------------------------ಕೊಡಗಿನಲ್ಲಿ ಸಾಧಾರಣ ಮಳೆ
ಮಡಿಕೇರಿ : ಜಿಲ್ಲೆಯಾದ್ಯಂತ ಕೊಡಗಿನಲ್ಲಿ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವೆಡೆ ಬಿಡುವು ನೀಡಿ ಆಗಾಗ್ಗೆ ಮಳೆ ಸುರಿಯಿತು.ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.76 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 51.73 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 971.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 395.23 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ 35.20 ಮಿ.ಮೀ. ಕಳೆದ ವರ್ಷ ಇದೇ ದಿನ 87.28 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1410.22 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 722.57 ಮಿ.ಮೀ. ಮಳೆಯಾಗಿತ್ತು.ವಿರಾಜಪೇಟೆ ತಾಲೂಕಿನಲ್ಲಿ 21.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 59.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1003.20 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 322.31 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲೂಕಿನಲ್ಲಿ 13.98 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 41.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 971.10 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 280.18 ಮಿ.ಮೀ. ಮಳೆಯಾಗಿತ್ತು.ಸೋಮವಾರಪೇಟೆ ತಾಲೂಕಿನಲ್ಲಿ 16 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 48.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 785.36 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 316.86 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲೂಕಿನಲ್ಲಿ 16.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 686.30 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 334.25 ಮಿ.ಮೀ. ಮಳೆಯಾಗಿತ್ತು.ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 38.20, ನಾಪೋಕ್ಲು 30.20, ಸಂಪಾಜೆ 16, ಭಾಗಮಂಡಲ 56.40, ವಿರಾಜಪೇಟೆ 28.60, ಅಮ್ಮತ್ತಿ 15, ಹುದಿಕೇರಿ 18.30, ಶ್ರೀಮಂಗಲ 13.60, ಪೊನ್ನಂಪೇಟೆ 12, ಬಾಳೆಲೆ 12, ಸೋಮವಾರಪೇಟೆ ಕಸಬಾ 13.60, ಶನಿವಾರಸಂತೆ 9.20, ಶಾಂತಳ್ಳಿ 33, ಕೊಡ್ಲಿಪೇಟೆ 8.20, ಕುಶಾಲನಗರ 9.60, ಸುಂಟಿಕೊಪ್ಪ 24 ಮಿ.ಮೀ.ಮಳೆಯಾಗಿದೆ.