ಕನ್ನಡಪ್ರಭ ವಾರ್ತೆ ಕೋಲಾರಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕದಿಂದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಗರದ ಗಾಂಧಿವನದಿಂದ ಮೆರವಣಿಗೆ ನಡೆಸಿ ತಹಸೀಲ್ದಾರ್ ಕಚೇರಿ ಮುಂದೆ ಬೃಹತ್ ಪ್ರತಿಭಟಿಸಿದರು.ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ದೇಶದಲ್ಲಿ ಕಾರ್ಮಿಕರ ಹಕ್ಕುಗಳಿಗಾಗಿ ಇದ್ದ 29 ಕಾರ್ಮಿಕ ಕಾಯ್ದೆಗಳನ್ನು 4 ಕಾರ್ಮಿಕ ಕೋಡ್‌ಗಳಾಗಿ ಜಾರಿಗೊಳಿಸಿದ್ದಾರೆ ಕಾರ್ಮಿಕರು ಮುಷ್ಕರ ನಡೆಸಿದರೆ ದಂಡ, ಜೈಲು ಶಿಕ್ಷೆ, ವೇತನ ಕಡಿತಗೊಳಿಸಲಾಗುವ ನೀತಿಗಳು ಜಾರಿ ಮಾಡಿದ್ದಾರೆ. ನರೇಗಾದಡಿ ಕೆಲಸದ ಹಕ್ಕನ್ನು ಕಸೆದುಕೊಂಡು ಗ್ರಾಮೀಣ ಜನರ ದುಡಿಯುವ ಹಕ್ಕನ್ನು ನಿಯಂತ್ರಣ ಮಾಡುವ ಮೂಲಕ ಗ್ರಾಮೀಣ ಜನರ ಜೀವನ ಕಸೆದುಕೊಂಡು ಬೀದಿ ಪಾಲಾಗುವಂತೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ದೇಶದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯುಚ್ಛಕ್ತಿ ಖಾಸಗೀಕರಣ, ಪ್ರಸರಣ ಮತ್ತು ಅನುಷ್ಠಾನ ನಿರ್ವಹಣೆ ಖಾಸಗಿ ಬಂಡವಾಳಗಾರರಿಗೆ ನೀಡುವ ಮೂಲಕ ರೈತರು, ಜನಸಾಮಾನ್ಯರ ಸಬ್ಸಿಡಿಗೆ ಮೋಸ ಮಾಡಿದ್ದಾರೆ. ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡದೇ ಕೃಷಿಯನ್ನು ಉತ್ತೇಜಿಸದೇ ಭೂ ಸ್ವಾದೀನ ಕಾಯ್ದೆ ಮೂಲಕ ರೈತ ಜಮೀನು ಕಸಿದುಕೊಳ್ಳುವ ಹುನ್ನಾರ ಮಾಡಿದ್ದಾರೆ ಎಂದರು.ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ, ಕೆ.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ.ವೆಂಕಟೇಶ್, ಮುಖಂಡರಾದ ಹೆಚ್.ಬಿ.ಕೃಷ್ಣಪ್ಪ, ಎಂ.ಭೀಮರಾಜ್, ಎನ್.ಕಲ್ಪನಾ, ಆಶಾ, ವಿ.ಮಂಜುಳ, ಲಕ್ಷ್ಮಿದೇವಿ, ರಾಜಮ್ಮ, ರಾಮಚಂದ್ರಪ್ಪ, ವಿಜಯಕುಮಾರ್, ಅಂಜನಪ್ಪ, ನಿಕಿಲ್, ಶಿವಕುಮಾರ್, ಪೃಥ್ವಿ, ಮೂರ್ತಿ, ರಮೇಶ್, ನಾರಾಯಣರೆಡ್ಡಿ, ಶಾಂತಮ್ಮ, ಬುಟ್ಟಾಲ ಗಣೇಶ್, ಎಂ.ಶ್ರೀನಿವಾಸ್, ನವೀನ್ ಕುಮಾರ್ ಇದ್ದರು.
ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ
ದೇಶದಲ್ಲಿ ಕಾರ್ಮಿಕರ ಹಕ್ಕುಗಳಿಗಾಗಿ ಇದ್ದ 29 ಕಾರ್ಮಿಕ ಕಾಯ್ದೆಗಳನ್ನು 4 ಕಾರ್ಮಿಕ ಕೋಡ್‌ಗಳಾಗಿ ಜಾರಿಗೊಳಿಸಿದ್ದಾರೆ ಕಾರ್ಮಿಕರು ಮುಷ್ಕರ ನಡೆಸಿದರೆ ದಂಡ, ಜೈಲು ಶಿಕ್ಷೆ, ವೇತನ ಕಡಿತಗೊಳಿಸಲಾಗುವ ನೀತಿಗಳು ಜಾರಿ ಮಾಡಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.