ರಾಜ್ಯ ರೈತರ ಬಂಧನ ಖಂಡಿಸಿ ಪ್ರತಿಭಟನೆ

| Published : Feb 13 2024, 12:47 AM IST

ಸಾರಾಂಶ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆಕೊಟ್ಟಿದ್ದ ಫೆ.13 ರ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ನೂರಾರು ರೈತರನ್ನು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಂಧನ ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು

ಕನ್ನಡಪ್ರಭ ವಾರ್ತೆ ಚಾಮರಾಜನಗರವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆಕೊಟ್ಟಿದ್ದ ಫೆ.13 ರ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ನೂರಾರು ರೈತರನ್ನು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಂಧನ ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ತಾಲೂಕು ಅಧ್ಯಕ್ಷ ಸತೀಶ್, ಕಾರ್ಯದರ್ಶಿ ಸುಂದರಪ್ಪ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಅಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ತಡೆದು ಕೆಲಕಾಲ ಪ್ರತಿಭಟನೆ ನಡೆಸಿದರು. ಸರ್ಕಾರ, ಪೋಲಿಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆ ನೇತೃತ್ವ ವಹಿಸಿದ್ದ ತಾಲೂಕು ಅಧ್ಯಕ್ಷ ಸತೀಶ್, ಕಾರ್ಯದರ್ಶಿ ಸುಂದರಪ್ಪ ಮಾತನಾಡಿ, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆಕೊಟ್ಟಿದ್ದ ಫೆ.13 ರ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರಾಜ್ಯದ ನೂರಾರು ರೈರತನ್ನು ಮಧ್ಯಪ್ರದೇಶದ ಭೋಪಾಲ್‌ನ ರೈಲು ನಿಲ್ದಾಣದಲ್ಲಿ ರಾತ್ರಿಯಲ್ಲಿ ಪೋಲಿಸರು ಬಂಧಿಸಿರುವುದು ಅತ್ಯಂತ ಖಂಡನೀಯವಾಗಿದೆ. ರೈತರ ಹೋರಾಟವನ್ನು ಸರ್ಕಾರ ಪೋಲಿಸರನ್ನು ಬಳಸಿಕೊಂಡು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕೂಡಲೇ ಬಂಧಿಸಿರುವ ರಾಜ್ಯದ ರೈತರನ್ನು ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಜೈಲೋ ಭರೋ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಗುರುಪ್ರಸಾದ್ ಉಡಿಗಾಲ, ವಿಜಿ ಬಡಗಲಪುರ, ಬಾಬು ಕಾಗಲವಾಡಿ, ಮಾದೇಶ್, ವೆಂಕಟೇಶ್, ಪ್ರಕಾಶ್, ಕೃಷ್ಣಪ್ಪ, ಮಹೇಂದ್ರ ಇತರರು ಭಾಗವಹಿಸಿದ್ದರು.