ಸಾರಾಂಶ
ಕಾರವಾರ: ಮಾಜಾಳಿ ಅಬಕಾರಿ ಚೆಕ್ ಪೋಸ್ಟ್ ಬಳಿ ಲಾರಿ ಚಾಲಕನ ಮೇಲೆ ಅಬಕಾರಿ ಸಿಬ್ಬಂದಿ ಹಲ್ಲೆ ಘಟನೆ ಖಂಡಿಸಿ ಸೋಮವಾರ ಮಾಜಾಳಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ಲಾರಿ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.
ಲಾರಿ ಚಾಲಕ ಕುಮಾರ ಎಂಬವರ ಮೇಲೆ ಅಬಕಾರಿ ಸಿಬ್ಬಂದಿ ಹಲ್ಲೆ ಮಾಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸ್ಟೇಟ್ ಲಾರಿ ಮಾಲಿಕ ಮತ್ತು ಏಜೆಂಟ್ಸ್ ಅಸೋಸಿಯೇಶನ್ ಹಾಗೂ ಉತ್ತರ ಕನ್ನಡ ಜಿಲ್ಲಾ ಸರಕು ಸಾಗಾಣಿಕ ಲಾರಿ ಮಾಲೀಕರ ಸಂಘ ಹಾಗೂ ಜನಶಕ್ತಿ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.ಅಬಕಾರಿ ನಿರೀಕ್ಷಕ ಸದಾಶಿವ ಕೊರ್ತಿ ಮತ್ತು ಗಾರ್ಡ್ ಹೇಮಚಂದ್ರ ಅವರನ್ನು ಅಮಾನತು ಮಾಡಿ, ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಲಾರಿ ಮಾಲೀಕರ ಸಂಘದ ರಾಷ್ಟ್ರೀಯ ಅಧ್ಯಕ್ಷ ಷಣ್ಮುಗಪ್ಪ ಮಾತನಾಡಿ, ವಿನಾಕಾರಣ ಅಬಕಾರಿ ಸಿಬ್ಬಂದಿ ಲಾರಿ ಚಾಲಕನ ಮೇಲೆ ಹಲ್ಲೆ ಮಾಡಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಗಡಿಯಲ್ಲಿ ಅಬಕಾರಿ ಚೆಕ್ ಪೋಸ್ಟ್ ತೆರವು ಮಾಡಬೇಕು ಎಂದು ಸರ್ರಕಾ ಈಗಾಗಲೇ ಆದೇಶ ಮಾಡಿದೆ. ಗೋವಾದಲ್ಲೂ ಚೆಕ್ ಪೋಸ್ಟ್ ಇಲ್ಲ. ಕರ್ನಾಟಕದ ಮಾಜಾಳಿಯಲ್ಲಿ ಚೆಕ್ ಪೋಸ್ಟ್ ಈಗಲೂ ಕಾರ್ಯನಿರ್ವಹಿಸುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಅಮಾಯಕ ಲಾರಿ ಚಾಲಕರಿಂದ ಹಣ ವಸೂಲಿ ಮಾಡಲು, ಚೆಕ್ ಪೋಸ್ಟ್ ಕಾರ್ಯ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು.
ತಪ್ಪಿತಸ್ಥ ಅಬಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಆಗದೇ ಇದ್ದರೇ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನಾಕಾರರು ಅಬಕಾರಿ ಉಪ ಆಯುಕ್ತ ಜಗದೀಶ ಹಾಗೂ ತಹಸೀಲ್ದಾರ್ ನಿಶ್ಚಲ ನರೋನ ಅವರಿಗೆ ಮನವಿ ನೀಡದರು. ಈ ಸಂದರ್ಭದಲ್ಲಿ ಲಾರಿ ಮಾಲೀಕರ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಸ್. ಮಣಿ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ಗೋವಾ ಲಾರಿ ಮಾಲೀಕರ ಸಂಘದ ಅಧ್ಯಕ್ಷರು, ಹಲ್ಲೆಗೆ ಒಳಗಾದ ಲಾರಿ ಚಾಲಕ ಕುಮಾರ್, ಲಾರಿ ಮತ್ತು ಟಿಪ್ಪರ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಗಣಪತಿ ನಾಯಕ ಮೂಲಿಮನೆ ಪ್ರತಿಭಟನೆಯಲ್ಲಿ ಭಾಗಿದ್ದರು.ಶಿರಸಿ ಪ್ರತ್ಯೇಕ ಜಿಲ್ಲೆಗಾಗಿ ಜನಾಂದೋಲನ ಅಗತ್ಯಶಿರಸಿ: ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಯಾಗಬೇಕು ಎಂಬ ಬೇಡಿಕೆ ಧನಾತ್ಮಕವಾಗಿ ಕೇಳಿಬರುತ್ತಿದೆ. ಹೋರಾಟದ ಕುರಿತು ಘಟ್ಟದ ಮೇಲಿನ ಎಲ್ಲ ತಾಲೂಕುಗಳ ಜನರ ಹೃದಯ ತಟ್ಟುವ ಕೆಲಸ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ರಿಸೋರ್ಸ್ ಫಾರ್ ಕ್ರಿಯೆಟಿವ್ ಡೆಮಾಕ್ರಸಿ ಸಂಸ್ಥೆಯ ಕೃಷ್ಣಮೂರ್ತಿ ಪನ್ನೆ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ನಾತಕೋತ್ರ ಕೇಂದ್ರ, ವಿಶ್ವವಿದ್ಯಾಲಯ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಜಿಲ್ಲಾ ಕೇಂದ್ರಕ್ಕೆ ಸೀಮಿತವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಶಿರಸಿ ಪ್ರತ್ಯೇಕ ಜಿಲ್ಲೆಯಾದರೆ ಇಲ್ಲಿ ಅನುಷ್ಠಾನಗೊಳ್ಳುತ್ತದೆ. ಶಿರಸಿ ಜಿಲ್ಲಾ ಕೇಂದ್ರಕ್ಕೆ ಶಿರಸಿ, ಯಲ್ಲಾಪುರ, ಮುಂಡಗೋಡ ತೀರಾ ಸಮೀಪದಲ್ಲಿದ್ದು, ಅಲ್ಲಿನ ಎಲ್ಲ ಜನರಿಗೂ ಪ್ರಯೋಜನ ಲಭಿಸಲಿದೆ. ಕೇಂದ್ರ ಸರ್ಕಾರದ ರೈಲ್ವೆ ಯೋಜನೆಯೂ ಅನುಷ್ಠಾನಗೊಳ್ಳಲು ಅವಕಾಶ ಹೆಚ್ಚಿರುತ್ತದೆ ಎಂದರು.ಶಿರಸಿ ಹೊಸ ಜಿಲ್ಲೆ ರಚನೆಯ ಅವಶ್ಯಕತೆ ಮತ್ತು ಅನಿವಾರ್ಯತೆಯ ಬಗ್ಗೆ ವಿದ್ಯಾವಂತರು, ಎಲ್ಲ ಸಂಘ- ಸಂಸ್ಥೆಗಳು, ಪ್ರತಿನಿಧಿಗಳು ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ ಅಭಿಪ್ರಾಯವನ್ನು ವ್ಯಾಪಕವಾಗಿ ಮಾಧ್ಯಮಗಳ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಬೆಂಬಲ ವ್ಯಕ್ತಪಡಿಸಿ, ಜನಾಭಿಪ್ರಾಯ ಕ್ರೋಢಿಕರಣಕ್ಕೆ ಸಹಕರಿಸಬೇಕು ಎಂದು ವಿನಂತಿಸಿದರು.ಸುದ್ದಿಗೋಷ್ಠಿಯಲ್ಲಿ ವಕೀಲರ ಸಂಘದ ಅಧ್ಯಕ್ಷ ಸಿ.ಎಫ್. ಈರೇಶ, ಪ್ರಮುಖರಾದ ಆರ್.ಜಿ. ಭಟ್ಟ, ಎಂ.ಎಸ್. ಹೆಗಡೆ, ಸುಭಾಸ್ ಕಾನಡೆ, ಬಿ.ಕೆ. ಕೆಂಪರಾಜು, ರಮಾನಂದ ನಾಯ್ಕ, ಜಿ.ವಿ. ಹೆಗಡೆ ಮತ್ತಿತರರು ಇದ್ದರು.