ಬಂಕಾಪುರ ಬಸ್‌ ನಿಲ್ದಾಣ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

| Published : Jan 25 2025, 01:04 AM IST

ಸಾರಾಂಶ

ತಾಲೂಕಿನ ಬಂಕಾಪುರ ಕೇಂದ್ರ ಬಸ್‌ ನಿಲ್ದಾಣದ ಅವ್ಯವಸ್ಥೆ ಖಂಡಿಸಿ ಶುಕ್ರವಾರ ಬಂಕಾಪುರ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸದಸ್ಯರು ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ಶಿಗ್ಗಾಂವಿ:ತಾಲೂಕಿನ ಬಂಕಾಪುರ ಕೇಂದ್ರ ಬಸ್‌ ನಿಲ್ದಾಣದ ಅವ್ಯವಸ್ಥೆ ಖಂಡಿಸಿ ಶುಕ್ರವಾರ ಬಂಕಾಪುರ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸದಸ್ಯರು ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಸವಣೂರು ಉಪ ವಿಭಾಗ ಅಧಿಕಾರಿ ಮಮತಾ ಹೊಸಗೌಡ್ರ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಅರ್ಪಿಸಿದರು.

ಹಾವೇರಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಅಧ್ಯಕ್ಷ ಮಂಜುನಾಥ ಓಲೇಕಾರ ಮಾತನಾಡಿ, ಗ್ರಾಮೀಣ ಪ್ರದೇಶಗಳಿಗೆ ಸರಿಯಾದ ಬಸ್ ವ್ಯವಸ್ಥೆ ಹಾಗೂ ಬಂಕಾಪುರ ಬಸ್ ನಿಲ್ದಾಣದಲ್ಲಿ ಸಿ.ಸಿ. ಕ್ಯಾಮೆರಾವನ್ನು ಹಾಗೂ ದ್ವಿಚಕ್ರ ವಾಹನಕ್ಕೆ ಸ್ಥಳವನ್ನು ನಿಗದಿ ಮಾಡಿ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲವನ್ನು ಮಾಡಿಕೊಡಬೇಕು ಎಂದರು. ಮನವಿಯನ್ನು ಸಾರಿಗೆ ಇಲಾಖಾ ಅಧಿಕಾರಿಗಳಿಗೆ ಹಾಗೂ ಸವಣೂರ ಉಪ ವಿಭಾಗಾಧಿಕಾರಿಗಳಿಗೆ ಸಲ್ಲಿಸಿದರು. ೮ ದಿನಗಳೊಳಗಾಗಿ ವ್ಯವಸ್ಥೆಯನ್ನು ಕಲ್ಪಿಸಬೇಕು ಇಲ್ಲದೆ ಹೋದರೆ ಉಗ್ರಪ್ರಮಾಣದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.