ಸಾರಾಂಶ
ರಮಜಾನ್ ತಿಂಗಳ ಕೊನೆಯ ಶುಕ್ರವಾರ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ನಡೆಸುವಂತೆ ಕರೆ ನೀಡಲಾಗಿತ್ತು.
ಭಟ್ಕಳ: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆಯ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ಶುಕ್ರವಾರ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಇಲ್ಲಿನ ಮುಸ್ಲಿಮರು ಕೈಗೆ ಕಪ್ಪು ಪಟ್ಟಿ ಧರಿಸಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಯಾವುದೇ ಕಾರಣಕ್ಕೂ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಬಾರದು ಎಂದು ಆಗ್ರಹಿಸಿದರು.
ರಮಜಾನ್ ತಿಂಗಳ ಕೊನೆಯ ಶುಕ್ರವಾರ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ನಡೆಸುವಂತೆ ಕರೆ ನೀಡಲಾಗಿತ್ತು. ಪಟ್ಟಣದ ನವಾಯತ್ ಕಾಲೋನಿಯಲ್ಲಿರುವ ಜಾಮಿಯಾ ಮಸೀದಿ ಬಳಿ ಮಜ್ಲಿಸೆ ಇಸ್ಲಾಹ ವ ತಂಝೀಂ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದರು.ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂಜೆ ನದ್ವಿ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯನಿರ್ವಾಹಕ ಸದಸ್ಯ ಅತಿಕುರ್ ರೆಹಮಾನ್ ಮುನಿರಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಭಟ್ಕಳದ ನವಾಯತ್ ಕಾಲೋನಿಯ ಜಾಮೀಯಾ ಮಸೀದಿ ಬಳಿ ತಂಝೀಂ ನೇತೃತ್ವದಲ್ಲಿ ಮುಸ್ಲಿಮರು ಕೇಂದ್ರದ ವಕ್ಫ್ ಕಾಯ್ದೆ ತಿದ್ದುಪಡಿ ಖಂಡಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.