ಸಾರಾಂಶ
ಸಿದ್ದಾಪುರ: ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಮಡಿವಾಳ ನೇತೃತ್ವದಲ್ಲಿ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.೪ರಷ್ಟು ಮೀಸಲಾತಿ ನೀಡುವ ವಿಚಾರವಾಗಿ ಡಿಸಿಎಂ, ಡಿ.ಕೆ. ಶಿವಕುಮಾರ್ ಅಲ್ಪಸಂಖ್ಯಾತರರಿಗೆ ಕೋಟಾ ನೀಡಲು ಸಂವಿಧಾನದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗುವುದು ಎಂಬ ಹೇಳಿಕೆ ವಿರೋಧಿಸಿ ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ನೇತೃತ್ವದಲ್ಲಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ ಶಿವಕುಮಾರ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಸಮಿತಿಯ ವಿಶೇಷ ಆಹ್ವಾನಿತ ಕೆ.ಜಿ. ನಾಯ್ಕ ಹಣಜೀಬೈಲ್ ಮಾತನಾಡಿ, ಸ್ವಾತಂತ್ರ‍್ಯ ಬಂದಾಗಿನಿಂದ ಇಲ್ಲಿಯವರೆಗೂ ಬಹುತೇಕ ೯೫ ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ ಪಕ್ಷದವರು ವೋಟಿಗಾಗಿ ಇದನ್ನೆಲ್ಲ ಮಾಡುತ್ತಾ ಇದ್ದಾರೆ. ಬಾಂಗ್ಲಾದಿಂದ ಬಂದಂತಹ ನಿರಾಶ್ರಿತರಿಗೆ ಅವಕಾಶ ಕೊಡುತ್ತಿದ್ದಾರೆ ಎಂದರು.
ಮುಸ್ಲಿಂ ಸಮುದಾಯ ಪ್ರಪಂಚದಲ್ಲಿ ನಾವೇ ದೊಡ್ಡ ಸಮುದಾಯ ಆಗಬೇಕು. ಪ್ರಪಂಚವನ್ನು ನಾವೇ ಆಳಬೇಕು ಎನ್ನುವ ಆಲೋಚನೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನವರು ಮುಸ್ಲಿಮರು ನಾಲ್ಕು ಸಂವಿಧಾನ ಬದಲಾವಣೆ ಮಾಡಿ ಅವರಿಗೆ ಮೀಸಲಾತಿಯನ್ನು ಕೊಟ್ಟು ಬಿಟ್ಟರೆ ಇನ್ನು 10-15 ವರ್ಷಗಳಲ್ಲಿ ಇದು ಪಾಕಿಸ್ತಾನ ಅಥವಾ ಬಾಂಗ್ಲಾ ಆಗುವುದರಲ್ಲಿ ಸಂಶಯವಿಲ್ಲ. ಶಿವಕುಮಾರ ಹೇಳಿಕೆಯನ್ನು ಖಂಡಿಸುತ್ತೇವೆ ಎಂದರು.ಪಪಂ ಸದಸ್ಯ ಗುರು ಶಾನಭಾಗ್, ಬಿಜೆಪಿ ಎಸ್ಪಿ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಬೋರ್ಕರ್ ಮಾತನಾಡಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಪದಾಧಿಕಾರಿಗಳು, ಪಪಂನ ಬಿಜೆಪಿ ಸದಸ್ಯರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸಿದ್ದಾಪುರದಲ್ಲಿ ಬಿಜೆಪಿ ಮಂಡಲದಿಂದ ಡಿ.ಕೆ.ಶಿವಕುಮಾರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.