ನಾಳೆ ಒಳಮೀಸಲಾತಿ ಜಾರಿ ವಿಳಂಬ ಖಂಡಿಸಿ ಪ್ರತಿಭಟನೆ

| Published : Jul 31 2025, 12:45 AM IST

ನಾಳೆ ಒಳಮೀಸಲಾತಿ ಜಾರಿ ವಿಳಂಬ ಖಂಡಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡಲು ಕುಂಟು ನೆಪ ಹೇಳುತ್ತಾ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಮಾದಿಗ ಒಳ ಮೀಸಲಾತಿ ಹೋರಾಟ ಒಕ್ಕೂಟದ ವತಿಯಿಂದ ಆ. 1 ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅರಕಲವಾಡಿ ನಾಗೇಂದ್ರ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡಲು ಕುಂಟು ನೆಪ ಹೇಳುತ್ತಾ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಮಾದಿಗ ಒಳ ಮೀಸಲಾತಿ ಹೋರಾಟ ಒಕ್ಕೂಟದ ವತಿಯಿಂದ ಆ. 1 ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಅರಕಲವಾಡಿ ನಾಗೇಂದ್ರ ತಿಳಿಸಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರು. ಸುಪ್ರೀಂಕೋರ್ಟ್ ಆದೇಶವನ್ನು ಧಿಕ್ಕರಿಸಿ ಕುಂಟು ನೆಪಗಳನ್ನು ಹೇಳುತ್ತಾ ಸರ್ಕಾರ ವಿಳಂಬ ಧೋರಣೆಯನ್ನು ಅನುಸರಿಸುತ್ತಿದೆ. ಆದ್ದರಿಂದ ಆ. 1ರಂದು ಇಡೀ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ಆ. 1 ರಂದು ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಲ್ಲಿ ಸಮಾವೇಶಗೊಂಡು ಅಲ್ಲಿಂದ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಲಾಗುವುದು ಎಂದರು.ಸುಪ್ರಿಂ ಕೋರ್ಟ್ ಕಳೆದ ಒಂದು ವರ್ಷದ ಹಿಂದೆ ಆ.1 ತೀರ್ಪು ನೀಡಿ ಒಳಮೀಸಲಾತಿ ನೀಡಲು ಆಯಾಯ ರಾಜ್ಯಗಳಿಗೆ ಆದೇಶ ನೀಡಿತ್ತು, ಕೆಲ ಆಂದ್ರ, ಹರಿಯಾಣ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಒಳ ಮೀಸಲಾತಿಯನ್ನು ಈಗಾಗಲೇ ಜಾರಿ ಮಾಡಿವೆ ಎಂದರು.ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಂದು ವರ್ಷವಾದರೂ ಅದರ ಬಗ್ಗೆ ಚಕಾರ ಎತ್ತದೆ ಒಳ ಮೀಸಲಾತಿ ಜಾರಿ ಮಾಡಲು ಇಚ್ಛಾಶಕ್ತಿ ತೋರುತ್ತಿಲ್ಲ, ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ರಚಿಸಿ, ವರದಿಯನ್ನು ಸ್ವೀಕರಿಸಿ ಜಾರಿ ಮಾಡದೇ 101 ಜಾತಿಯಲ್ಲೇ ಒಡಕು ಉಂಟು ಮಾಡುವ ಕೆಲಸ ಮಾಡುತ್ತಿದೆ ಎಂದರು ಆರೋಪಿಸಿದರು.ನಾವು ಸಾಮಾಜಿಕ ನ್ಯಾಯದ ಪರ, ಸಂವಿಧಾ ರಕ್ಷಕರು ಎಂದು ಸುಳ್ಳು ಹೇಳುತ್ತಾ, ಒಳ ಮೀಸಲಾತಿ ಜಾರಿ ಮಾಡದೇ ಜನಾಂಗಕ್ಕೆ ಅನ್ಯಾಯ ಮಾಡುತ್ತಿದೆ, ಈ ನಮ್ಮ ಹೋರಾಟ ಕಳೆದ 35 ವರ್ಷಗಳ ಹೋರಾಟ, ಇದೆರ ಫಲವಾಗಿಯೇ ಸುಪ್ರೀಂಕೋರ್ಟ್ ದತ್ತಾಂಶ ಸಂಗ್ರಹಿಸಿ ಒಳಮೀಸಲಾತಿ ನೀಡಲು ಆಯಾಯ ರಾಜ್ಯಗಳಿಗೆ ಆದೇಶ ನೀಡಿತ್ತು ಎಂದರು.35 ವರ್ಷಗಳಿಂದ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸುವಂತೆ ನಿರಂತರ ಹೋರಾಟ ಮಾಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಒಳಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿತ್ತು, ಸದಾಶಿವ ಆಯೋಗದ ಕುಂಟುನೆಪ ಹೇಳಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ ಎಂದರು,ರಾಜ್ಯ ಸರ್ಕಾರಕ್ಕೆ ಮಾಧುಸ್ವಾಮಿ,, ಹಾವನೂರ, ಕಾಂತರಾಜು ಆಯೋಗಗಳ ವರದಿ ಗೊತ್ತಿದ್ದರೂ, ನ್ಯಾಯಮೂರ್ತಿ ಜಗಮೋಹನದಾಸ್ ಮಧ್ಯಂತರ ವರದಿಯ ಮೀಸಲಾತಿ ಜಾರಿ ಮಾಡದೇ ಅನ್ಯಾಯ ಎಸಗುತ್ತಿವೆ. ಈಗಾಗಲೇ ಎಲ್ಲ ಅಯೋಗಗಳ ವರದಿಯಲ್ಲಿರುವ ದತ್ತಾಂಶಗಳ ಸಂಗ್ರಹಣೆ ಅಧಿಕಾರಿಗಳಿಗೆ ಕೇವಲ 2-3 ದಿನ ಅಷ್ಟೇ ಸಾಕಾಗುತ್ತದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದತ್ತಾಂಶ ಸಂಗ್ರಹಣೆಗೆ 2-3 ತಿಂಗಳು ಕಾಲಾವಕಾಶ ತೆಗೆದುಕೊಂಡಿದ್ದು, ಈ ಮೂಲಕ ಮತ್ತೆ ಒಳಮೀಸಲಾತಿ ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.ಸರ್ಕಾರ ಒಳಮೀಸಲಾತಿ ಜಾರಿ ಮಾಡದೇ ಉನ್ನತ ಹುದ್ದೆಗಳ ಭರ್ತಿ ಹಾಗೂ ಬಡ್ತಿ ನೀಡಲು ಸಾಧ್ಯವಿಲ್ಲ. ಒಳಮೀಸಲಾತಿ ನೀಡಿದರೆ ಮಾದಿಗ ಸಮುದಾಯಕ್ಕೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ. ೬೦ ಸಾವಿರ ಬ್ಯಾಕ್‌ಲಾಗ್ ಹುದ್ದೆ ಖಾಲಿ ಇದೆ. ಅನ್ಯಾಯಕ್ಕೆ ಒಳಗಾದ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ವಕೀಲರಾದ ಬೂದಿತಿಟ್ಟು ರಾಜೇಂದ್ರ, ಸಿದ್ದೇಶ್, ಸಿದ್ದಯ್ಯ ಗ್ರಾ.ಪಂ.ಮಾಜಿ ಅಧ್ಯಕ್ಷ ಮೂಡಹಳ್ಳಿ ಮೂರ್ತಿ, ರಾಮಸಮುದ್ರ ಶಿವಣ್ಣ, ಬೆಳ್ಳಿಯಪ್ಪ, ಸಿ.ಎಚ್.ರಂಗಸ್ವಾಮಿ, ಸುಂದರ್ ಇದ್ದರು.