ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

| Published : May 16 2025, 01:49 AM IST

ಸಾರಾಂಶ

ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ವಿದ್ಯುತ್ ಸಮರ್ಪಕ ಪೂರೈಕೆಯಾಗುತ್ತಿಲ್ಲ. ರಾತ್ರಿಯ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ರೈತರು ಪರಿತಪಿಸುತ್ತಿದ್ದಾರೆ. ಈ ನಡುವೆ ರೈತರ ಪಂಪಸೆಟ್ ಗಳನ್ನು ಆಧಾರ ಕಾರ್ಡ್‌ಗೆ ಲಿಂಕ್ ಮಾಡುತ್ತಿದ್ದಾರೆ.

ಕೊಪ್ಪಳ:

ರಾಜ್ಯ ಮತ್ತು ಕೇಂದ್ರ ಸರ್ಕಾರ ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿದ್ದು ಇದನ್ನು ಕೈಬಿಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಡಾ. ವಾಸುದೇವ ಮೇಟಿ ಬಣ) ಕೊಪ್ಪಳ ಜೆಸ್ಕಾಂ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿತು. ಜೆಸ್ಕಾಂ ಕಚೇರಿ ಎದುರಿನ ಕೆಇಬಿ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಕಾರ್ಯನಿರ್ವಾಹಕ ಅಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿತು.

ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ವಿದ್ಯುತ್ ಸಮರ್ಪಕ ಪೂರೈಕೆಯಾಗುತ್ತಿಲ್ಲ. ರಾತ್ರಿಯ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ರೈತರು ಪರಿತಪಿಸುತ್ತಿದ್ದಾರೆ. ಈ ನಡುವೆ ರೈತರ ಪಂಪಸೆಟ್ ಗಳನ್ನು ಆಧಾರ ಕಾರ್ಡ್‌ಗೆ ಲಿಂಕ್ ಮಾಡುತ್ತಿದ್ದಾರೆ. ಈ ಮಲೂಕ ಓರ್ವ ರೈತನಿಗೆ ಒಂದೇ ಪಂಪಸೆಟ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತದೆ. ಇದೆಲ್ಲವೂ ಖಾಸಗೀಕರಣದ ಭಾಗವಾಗಿದ್ದು, ಇದನ್ನು ನಾವು ವಿರೋಧಿಸುತ್ತಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ಆಧಾರ್‌ ಲಿಂಕ್ ಮಾಡುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಮುದಿಯಪ್ಪ ನಾಯಕ, ಶರಣಪ್ಪ ಸೋಮಸಾಗರ, ಅಪ್ಪಣ್ಣ ಡೊಳ್ಳಿನ, ಶಿವಾನಂದ ವಂಕಲಕುಂಟಿ, ಕಾಸೀಂ ಶ್ರೀಶೈಲ, ಶರಣಬಸಪ್ಪ ದಾನಕೈ, ಪರುಶರಾಮ ಪೂಜಾರ ಮೊದಲಾದವರು ಇದ್ದರು.