16 ರಂದು ಹೇಮಾವತಿ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ

| Published : May 14 2024, 01:07 AM IST

16 ರಂದು ಹೇಮಾವತಿ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮ ಜಿಲ್ಲೆಯ ಹೇಮಾವತಿ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗಲು ಆರಂಭಿಸಿರುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯೋಜನೆಯನ್ನು ವಿರೋಧಿಸಿ ಮೇ. 16ರಂದು ಗುಬ್ಬಿ ತಾಲೂಕಿನ ಡಿ. ರಾಂಪುರದ ಬಳಿ ಹೋರಾಟ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲೆ, ತಾಲೂಕಿನ ರೈತರು, ಮಹಿಳೆಯರು, ಮುಖಂಡರು, ಭಾಗವಹಿಸಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ತಿಪಟೂರು

ನಮ್ಮ ಜಿಲ್ಲೆಯ ಹೇಮಾವತಿ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗಲು ಆರಂಭಿಸಿರುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯೋಜನೆಯನ್ನು ವಿರೋಧಿಸಿ ಮೇ. 16ರಂದು ಗುಬ್ಬಿ ತಾಲೂಕಿನ ಡಿ. ರಾಂಪುರದ ಬಳಿ ಹೋರಾಟ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲೆ, ತಾಲೂಕಿನ ರೈತರು, ಮಹಿಳೆಯರು, ಮುಖಂಡರು, ಭಾಗವಹಿಸಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಮನವಿ ಮಾಡಿದ್ದಾರೆ.ಹೇಮಾವತಿ ಗೋರೂರು ಜಲಾಶಯದಿಂದ 24.5 ಟಿಎಂಸಿ ನೀರು ಹಂಚಿಕೆಯಾಗಿದ್ದು, ಆದರೆ ಈ ನೀರನ್ನು ಪ್ರತಿ ವರ್ಷವೂ ಗೊರೂರು ಜಲಾಶಯದಿಂದ ಪೂರ್ಣ ಪ್ರಮಾಣದಲ್ಲಿ ಹರಿಸದೆ ಜಿಲ್ಲೆಯ ರೈತರು, ಜನ, ಜಾನುವಾರು ಮತ್ತು ಪ್ರಾಣಿ ಪಕ್ಷಿಗಳ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ನಮ್ಮ ಪಾಲಿನ ನೀರನ್ನು ನಮಗೆ ಕೊಡದೆ ಸರ್ಕಾರ ಹಾಗೂ ಸಂಬಂದಪಟ್ಟ ಉಸ್ತುವಾರಿ ಸಚಿವರು ಸಭೆ ನಡೆಸಿ, ನಿಯಮ ಬಾಹಿರವಾಗಿ ಪೈಪ್‌ಲೈನ್ ಮೂಲಕ ಮಾಗಡಿಗೆ ನೀರು ತೆಗೆದುಕೊಂಡು ಹೋಗುವ ನೀರ್ಣಯ ಮಾಡಿದ್ದಾರೆ. ಈ ಕಾಮಗಾರಿಗೆ ಈಗಾಗಲೇ ರೈತರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ರಾಜಕೀಯ ಪಕ್ಷಗಳು, ಮಠಾಧೀಶರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.