ಸಾರಾಂಶ
ಹರಿಹರ: ನಗರದ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗಳ ಸುಧಾರಣೆ ಸಂಬಂಧ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ತಾಲೂಕು ಜಯ ಕರ್ನಾಟಕ ಸಂಘಟನೆ ವತಿಯಿಂದ ತಾಲೂಕು ವೈದ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಗೋವಿಂದ ಮಾತನಾಡಿ, ನಗರದ ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಇಲ್ಲಿನ ವೈದ್ಯರು ಔಷಧಿಗಳನ್ನು ಖಾಸಗಿ ಮೆಡಿಕಲ್ ಶಾಪ್‌ಗಳಲ್ಲಿ ಖರೀದಿಸಿ ತರುವಂತೆ ಹೇಳುತ್ತಿದ್ದಾರೆ ಎಂದು ದೂರಿದರು.ಸರ್ಕಾರಿ ಆಸ್ಪತ್ರೆಗಳಿಗೆ ಶ್ರೀಮಂತರು ಬರುವುದಿಲ್ಲ, ಕೂಲಿ ಮಾಡುವ ಬಡವರು ಮಾತ್ರ ಆಗಮಿಸುತ್ತಾರೆ. ಅಲ್ಲದೇ, ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿಗಳನ್ನು ಸರ್ಕಾರವೇ ಪೂರೈಸುತ್ತಿದ್ದರೂ, ಹೊರಗಿನಿಂದ ಔಷಧಿ ತರಲು ಇಲ್ಲಿನ ವೈದ್ಯರು ಚೀಟಿ ಬರೆದು ಕೊಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಆಸ್ಪತ್ರೆಗೆ ಆಗಮಿಸುವ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ವ್ಯವಸ್ಥೆ ಹಾಗೂ ಥೈರಾಯ್ಡ್ ರೋಗಿಗಳಿಗೆ ರಕ್ತ ಪರೀಕ್ಷೆ ವ್ಯವಸ್ಥೆ ಇಲ್ಲ. ಇಲ್ಲಿನ ಜನೌಷಧಿ ಅಂಗಡಿಯಲ್ಲಿ ಎಲ್ಲ ತರದ ಔಷಧಿಗಳು ನಿರಂತರ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.ಸಂಘಟನೆ ಉಪಾಧ್ಯಕ್ಷ ಎಂ.ಆರ್.ಆನಂದ, ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಗ್ರಾಮ ಘಟಕದ ಆಧ್ಯಕ್ಷ ಭರತ್, ಶ್ರೀನಿವಾಸ, ದಾದಾಪೀರ್, ಯೋಗೇಶ್, ಆದರ್ಶ, ಸುದೀಪ, ಮಹಾರುದ್ರ, ರಿಯಾಜ್, ರವಿ. ಪ್ರದೀಪ್, ಗಿರಿ, ಹನುಮಂತ ಹಾಗೂ ಇತರರು ಭಾಗವಹಿಸಿದ್ದರು.
- - - (** ಈ ಪೋಟೋ-ಕ್ಯಾಪ್ಷನ್ ಪ್ಯಾನೆಲ್‌ಗೆ ಬಳಸಬಹುದು) -ಫೋಟೋ:ಹರಿಹರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ತಾಲೂಕು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಅಧ್ಯಕ್ಷ ಎಸ್.ಗೋವಿಂದ ನೇತೃತ್ವದಲ್ಲಿ ತಾಲೂಕು ವೈದ್ಯಾಧಿಕಾರಿಗೆ ಮನವಿ ಸಲ್ಲಿಸಿದರು.