ನೇಹಾ ಹತ್ಯೆ ಖಂಡಿಸಿ ಪ್ರತಿಭಟನೆ: ಕಠಿಣ ಶಿಕ್ಷೆಗೆ ಒತ್ತಾಯ

| Published : Apr 21 2024, 02:19 AM IST

ಸಾರಾಂಶ

ಸಿರವಾರ ತಹಸೀಲ್ದಾರ್ ಕಚೇರಿ ಮುಂದೆ ನೇಹಾ ಹತ್ಯೆ ಖಂಡಿಸಿ ಪಟ್ಟಣದ ಮುಖಂಡರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಿಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಶನಿವಾರ ಮನವಿ ಪತ್ರ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಸಿರವಾರ

ಹುಬ್ಬಳ್ಳಿ ಕಾಲೇಜಿನಲ್ಲಿ ನೇಹಾ ವಿದ್ಯಾರ್ಥಿನಿ ಹತ್ಯೆ ಖಂಡಿಸಿ ಪಟ್ಟಣದ ಮುಖಂಡರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಿಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಸಿಬ್ಬಂದಿಗೆ ಶನಿವಾರ ಮನವಿ ಪತ್ರ ಸಲ್ಲಿಸಲಾಯಿತು.

ತಹಶೀಲ್ದಾರ್ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುಖಂಡ ಜೆ.ಶರಣಪ್ಪಗೌಡ, ರಾಜ್ಯದಲ್ಲಿ ಕೊಲೆಗಳು ಹೆಚ್ಚಾಗಿದ್ದು, ಇದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೂಡಲೇ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು. ನೇಹಾ ಹತ್ಯೆ ಕುರಿತು ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳ ನೀಡಿದ ಹೇಳಿಕೆಗಳು ಕುಟುಂಬಸ್ಥರು ಮತ್ತು ರಾಜ್ಯದ ಯುವ ಜನತೆಗೆ ನೋವುಂಟಾಗಿದ್ದು ಇದು ಖಂಡನೀಯ, ಕೂಡಲೇ ಹೇಳಿಕೆಯನ್ನು ವಾಪಾಸು ಪಡೆದು, ಕೇವಲ ಮತಕ್ಕಾಗಿ ಒಂದು ಜನಾಂಗವನ್ನು ತುಷ್ಟೀಕರಣ ಮಾಡುವುದನ್ನು ನಿಲ್ಲಿಸಬೇಕು ಎಂದರು.

ಮುಖಂಡ ಎನ್.ಉದಯ ಕುಮಾರ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಭದ್ರತೆ ಇಲ್ಲ, ಸರ್ಕಾರಗಳು ಸರಿಯಾದ ಕ್ರಮ ಕೈಗೊಳ್ಳದೆ ಇರುವುದು ಈ ರೀತಿಯ ಘಟನೆಗಳು ಮರುಕಳಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುಕ್ಕಿ ಸೂಗಪ್ಪ ಸಾಹುಕಾರ, ಚಂದ್ರು ಕಳಸ, ನರಸಿಂಹರಾವ್ ಕುಲಕರ್ಣಿ, ಮಲ್ಲಪ್ಪ ಸಾಹುಕಾರ, ಚಂದ್ರಶೇಖರಯ್ಯ ಸ್ವಾಮಿ, ಕಾಶಿನಾಥ ಸರೋದೆ ಸೇರಿದಂತೆ ವಿವಿಧ ಸಂಘಟನೆ ಮುಖಂಡರು, ಸಮಾಜದ ಮುಖಂಡರು ಭಾಗವಹಿಸಿದ್ದರು.