ಸಾರಾಂಶ
ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿರುವ ಹಿನ್ನೆಲೆ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಗೋಕಾಕ
ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿರುವ ಹಿನ್ನೆಲೆ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಗುರುವಾರ ಮನವಿ ಸಲ್ಲಿಸಿದರು.ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ವಾಹನ ಸವಾರರಿಗೆ ಮಾತ್ರ ಹೊರೆಯಾಗುವುದಿಲ್ಲ. ಇದು ಸರಕು, ಸಾಗಾಣಿಕೆಯ ಮೇಲೆಯೂ ಪರಿಣಾಮ ಬೀರುತ್ತದೆ. ಪ್ರಯಾಣದ ದರವು ಹೆಚ್ಚಲಿದೆ. ತರಕಾರಿ, ದಿನಿತ್ಯ ಗೃಹಬಳಕೆ ವಸ್ತುಗಳು, ದವಸ ಧಾನ್ಯಗಳು, ಕಟ್ಟಡ ಸಾಮಗ್ರಿಗಳ ಬೆಲೆಯೂ ಹೆಚ್ಚಲಿದೆ. ಇದರಿಂದ ರಾಜ್ಯದ ಜನರನ್ನು ಸಂಕಷ್ಟಕ್ಕೆ ತಳ್ಳಿದಂತಾಗುತ್ತದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸುವ ಮೂಲಕ ನಾವು ಸರ್ಕಾರ ನಡೆಸುತ್ತೇವೆಂದು ಹೊರಟಿರುವ ಕಾಂಗ್ರೆಸ್ ಸರ್ಕಾರ ಜನರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿದೆ. ಕೂಡಲೇ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ, ಮಾಜಿ ಶಾಸಕ ಎಂ.ಎಲ್.ಮುತ್ತೇನ್ನವರ, ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಮುಖಂಡರುಗಳಾದ ಟಿ.ಆರ್.ಕಾಗಲ, ಎಂ.ಎಲ್.ತೋಳಿನವರ, ಅಬ್ಬಾಸ್ ದೇಸಾಯಿ, ಬಸವರಾಜ ಆರೇನ್ನವರ, ರಾಜೇಶ್ವರಿ ಒಡೆಯರ, ಲಕ್ಕಪ್ಪ ಬಂಡಿ, ಮಂಜುನಾಥ ಮಾವರಕರ, ಅನೀಲ ತುರಾಯಿದಾರ, ಆನಂದ ಉಳ್ಳಾಗಡ್ಡಿ, ಮಂಜು ಪ್ರಭುನಟ್ಟಿ ಸೇರಿದಂತೆ ಅನೇಕರು ಇದ್ದರು.