ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಖಂಡಿಸಿ ಪ್ರತಿಭಟನೆ

| Published : Jan 24 2024, 02:00 AM IST

ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಖಂಡಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವ ಮೂಲಕ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪಟ್ಟಣದ ಬೀದರ-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಮೇಲೆ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆದು ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಜೇವರ್ಗಿ

ಕೋಟನೂರ (ಡಿ) ಹತ್ತಿರವಿರುವ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವ ಮೂಲಕ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪಟ್ಟಣದ ಬೀದರ-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಮೇಲೆ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆದು ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಸೋಮವಾರ ರಾತ್ರಿ ಸಮಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ರಾಜ್ಯ ಸರಕಾರವನ್ನು ಆಗ್ರಹಿಸಿದರು. ಅವಮಾನ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು. ಬಂಧಿಸದಿದ್ದರೆ ಜಿಲ್ಲಾದ್ಯಂತ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಚಂದ್ರಶೇಖರ ಹರನಾಳ, ಮರೆಪ್ಪ ಬಡಿಗೇರ, ಪುಂಡಲೀಕ ಗಾಯಕವಾಡ, ಸಿದ್ರಾಮ ಕಟ್ಟಿ, ಶರಣಬಸವ ಕಲ್ಲಾ, ರಾಯಪ್ಪ ಬಾರಿಗೀಡ, ವಿಶ್ವಾರಾಧ್ಯ ಗಂವ್ಹಾರ, ಶ್ರೀಹರಿ ಕರಕಿಹಳ್ಳಿ, ಮಹೇಶ ಕೋಕಿಲೆ, ರವಿ ಕುಳಗೇರಿ, ರಜನೀಶ ಪಂಚಶೀಲ, ಸಿದ್ದು ಕರೂರ, ದೇವಿಂದ್ರ ವರ್ಮಾ, ಮಲ್ಲಿಕಾರ್ಜುನ ಕಟ್ಟಿಮನಿ, ಶರಣಬಸ್ಸಪ್ಪ ರೇವನೂರ, ಭಾಗಣ್ಣ ಸಿದ್ನಾಳ, ಮಾನಪ್ಪ ಕಟ್ಟಿಮನಿ, ವಿಜಯಕುಮಾರ ಧರೇನ್, ಮರೆಪ್ಪ ಜನಿವಾರ, ನಿಂಗಣ್ಣ ರದ್ದೇವಾಡಗಿ, ರಾಯಪ್ಪ ಬುಳ್ಳಾ, ಭೀಮ ಆರ್ಮಿಯ ಸಿದ್ದು ಮುದಬಾಳ, ಸುಭಾಷ ಆಲೂರ, ಅಬ್ದುಲ್ ಘನಿ, ವಿಶ್ವರಾಧ್ಯ ಗೋಪಾಲಕರ್, ಮರೆಪ್ಪ ಆಂದೋಲಾ ಸೇರಿದಂತೆ ಅಭಿಮಾನಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ಪುತ್ಥಳಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೆ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಸರ್ಕಾರ ಇಂತಹ ದುರ್ಘಟನೆಗಳನ್ನು ಮರುಕಳಿಸದಂತೆ ನೀಗಾ ವಹಿಸಬೇಕು. ಮಹಾನ ನಾಯಕರ ಪುತ್ಥಳಿಗಳು ಹಾಗೂ ನಾಮ ಫಲಕಗಳ ಬಳಿ ಸಿಸಿ ಕ್ಯಾಮರಾ ಅಳವಡಿಸಬೇಕೆಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಆಗ್ರಹಿಸಿದ್ದಾರೆ.