ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಶನಿವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ, ಗೃಹ ಸಚಿವ ಪರಮೇಶ್ವರ್ ಅವರು ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಉಡಾಫೆಯಿಂದ ವರ್ತಿಸುತ್ತಿದ್ದಾರೆ. ಇಲಾಖೆಯ ಮೇಲೆ ಹಿಡಿತವಿಲ್ಲದೆ ಇರುವುದರಿಂದ ತಕ್ಷಣವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಅಪರಾಧ ಪ್ರಕರಣಗಳನ್ನು ತಟೆಗಟ್ಟುವಲ್ಲಿ ಪೊಲೀಸರು ದಕ್ಷತೆಯಿಂದ ಕಾರ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಪರಮೇಶ್ವರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ರಾಜ್ಯ ಪ್ರಧಾನ ಕಾರ್ಯಾದರ್ಶಿ ಸಿ.ಎನ್.ದೀಪಕ್, ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ಜೀವನ್ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಸರ್ಕಾರಗಳ ವಿರುದ್ಧಲಾರಿ ಸಂಘ ಧರಣಿಕನ್ನಡಪ್ರಭ ವಾರ್ತೆ ಬೆಂಗಳೂರುಬೇಡಿಕೆಗಳನ್ನು ಈಡೇರಿಸಬೇಕೆಂದು ದೇಶಾದ್ಯಂತ ಲಾರಿ ಮಾಲೀಕರು ನಡೆಸುತ್ತಿರುವ ಮುಷ್ಕರ ಶನಿವಾರ ಮೂರನೇ ದಿನಕ್ಕೆ ಕಾಲಿರಿಸಿದ್ದು, ನಗರದಲ್ಲೂ ಲಾರಿ ಮಾಲೀಕರು ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ವಾತಂತ್ರ್ಯ ಉದ್ಯಾನವನದಲ್ಲಿ ಶನಿವಾರ ಬೆಳಗ್ಗೆ ಜಮಾಯಿಸಿದ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್‌ನ ಪದಾಧಿಕಾರಿಗಳು, ಸದಸ್ಯರು ಪ್ರತಿಭಟನೆ ನಡೆಸಿ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.ಈ ಸಂದರ್ಭದಲ್ಲಿ ಮಾತನಾಡಿದ ಅಸೋಸಿಯೇಷನ್ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಎಂ.ಗೋಪಾಲಸ್ವಾಮಿ, 3 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಮಾತುಕತೆಗೆ ಆಹ್ವಾನಿಸಿಲ್ಲ. ಮತ್ತೊಂದೆಡೆ ರಾಜ್ಯ ಸರ್ಕಾರವೂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ, ₹7 ಲಕ್ಷ ದಂಡ ವಿಧಿಸುವ ಕಾನೂನನ್ನು ಕೇಂದ್ರ ಸರ್ಕಾರ ತಕ್ಷಣ ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರವು ರಾಜ್ಯದ ಗಡಿ ಭಾಗದಲ್ಲಿರುವ ಸಾರಿಗೆ ಇಲಾಖೆಯ ಎಲ್ಲ ತಪಾಸಣಾ ಠಾಣೆಗಳನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.