ಟೂರಿಸ್ಟ್ ವಾಹನಗಳಿಗೆ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ ವಿರೋಧಿಸಿ ಪ್ರತಿಭಟನೆ

| Published : Jul 24 2024, 12:19 AM IST

ಟೂರಿಸ್ಟ್ ವಾಹನಗಳಿಗೆ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ ವಿರೋಧಿಸಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ವತಿಯಿಂದ ಟೂರಿಸ್ಟ್ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆಯನ್ನು ವಿರೋಧಿಸಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ವತಿಯಿಂದ ಟೂರಿಸ್ಟ್ ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆಯನ್ನು ವಿರೋಧಿಸಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಕೆ.ರಘುಪತಿ ಭಟ್ ಮಾತನಾಡಿ, ಬೆಂಗಳೂರಿನಂತಹ ನಗರಗಳಲ್ಲಿ ಇದು ನಡೆಯಬಹುದು. ಆದರೆ ಸೀಮಿತ ಜನಸಂಖ್ಯೆ ಇರುವ ಉಡುಪಿಯಲ್ಲಿ ಇದು ಅಸಾಧ್ಯದ ಮಾತು. ಟ್ಯಾಕ್ಸಿಯ ಹೊಸ ವಾಹನಗಳಿಗೆ ಅಳವಡಿಕೆ ಮಾಡುವ ನಿರ್ಧಾರವನ್ನು ಸರ್ಕಾರ ಮಾಡಬೇಕು. ಹಳೆ ವಾಹನಗಳಿಗೆ ಇದನ್ನು ಅಳವಡಿಸುವ ಸ್ಥಿತಿಯಲ್ಲಿ ಚಾಲಕರು-ಮಾಲಕರು ಇಲ್ಲ. ಈಗಾಗಲೇ ಟ್ಯಾಕ್ಸಿ ಚಾಲಕ-ಮಾಲಕರು ಹಲವಾರು ತೆರಿಗೆಗಳನ್ನು ಪಾವತಿಸಿ ನಷ್ಟದಲ್ಲಿ ದಿನ ದೂಡುತ್ತಿದ್ದಾರೆ, ಆದ್ದರಿಂದ ಸರ್ಕಾರದ ಈ ನಿಯಮ ಸರಿಯಲ್ಲ ಎಂದವರು ಹೇಳಿದರು.

ವೈಟ್‌ಬೋರ್ಡ್‌ನಲ್ಲಿ ಬಾಡಿಗೆ ಮಾಡುವವರಿಗೆ ಸರ್ಕಾರ ಕಡಿವಾಣ ಹಾಕಿದರೆ ಈ ಉದ್ಯಮ ಚೇತರಿಕೆ ಕಾಣಲು ಸಾಧ್ಯವಿದೆ. ಸಾಧ್ಯವಿದ್ದರೆ ಖಾಸಗಿಯಾಗಿ ಬಾಡಿಗೆ ಮಾಡುವ ವಾಹನಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದವರು ಆಗ್ರಹಿಸಿದರು.

ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ.ಕೋಟ್ಯಾನ್, ಕೆಟಿಡಿಓ ಅಧ್ಯಕ್ಷ ರಮೇಶ್ ಕುಂದಾಪುರ, ಉಪಾಧ್ಯಕ್ಷರಾದ ಮಂಜು ಪೂಜಾರಿ, ರಾಘವೇಂದ್ರ ಸೋಮಯಾಜಿ, ಜಯಕರ ಕುಂದರ್, ರವಿ ಶೆಟ್ಟಿ, ಸತೀಶ್ ನಾಯಕ್, ಕೋಶಾಧಿಕಾರಿ ಪ್ರಕಾಶ್ ಅಡಿಗ, ಜತೆ ಕೋಶಾಧಿಕಾರಿ ಕೃಷ್ಣ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಗಳಾದ ವಿಕ್ರಂ ರಾವ್, ಸತೀಶ್ ಶೆಟ್ಟಿ, ಮಹೇಶ್ ಕುಮಾರ್, ವಿನ್ಸಿ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಅನಂತರ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಹಾಗೂ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಪಿ.ನಾಯ್ಕ್ ಅವರಿಗೆ ಮನವಿ ಸಲ್ಲಿಸಲಾಯಿತು.