ಕನ್ನಡಪ್ರಭ ವಾರ್ತೆ ಬೆಳಗಾವಿಉತ್ತರ ಕರ್ನಾಟಕದ ಬಗ್ಗೆ ಶಾಸಕ ಪ್ರದೀಪ್ ಈಶ್ವರ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಕಾರ್ಯಕರ್ತರು ಸೋಮವಾರ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಉತ್ತರ ಕರ್ನಾಟಕದ ಬಗ್ಗೆ ಶಾಸಕ ಪ್ರದೀಪ್ ಈಶ್ವರ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಕಾರ್ಯಕರ್ತರು ಸೋಮವಾರ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಉತ್ತರ ಕರ್ನಾಟಕದ ಜನರ ಸ್ವಾಭಿಮಾನಕ್ಕೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿರುವ ಶಾಸಕ ಪ್ರದೀಪ ಈಶ್ವರ, ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು. ಅಲ್ಲದೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಪ್ರದೀಪ್ ಈಶ್ವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಮುಖಂಡ ನಾಗೇಶ ಗೊಲಶೆಟ್ಟಿ, ಪ್ರದೀಪ್ ಈಶ್ವರ ಒಬ್ಬ ಮೂರ್ಖ, ಹುಚ್ಚ ಎಂದು ಶಾಸಕ ಪ್ರದೀಪ್ ಈಶ್ವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಉತ್ತರ ಕರ್ನಾಟಕದ ಜನರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ಸಹಿಸುವುದಿಲ್ಲ. ಈ ಭಾಗದ ಜನರ ಸ್ವಾಭಿಮಾನ ಮತ್ತು ಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಯಾರೇ ಮಾತನಾಡಿದರೂ ಪ್ರತಿಭಟನೆ ನಡೆಸಲಾಗುವುದು ಎಂದು ಹೋರಾಟ ಸಮಿತಿ ಮುಖಂಡರು ಎಚ್ಚರಿಸಿದರು.