ಸಾರಾಂಶ
ಕಾಂಗ್ರೆಸ್ ಪಕ್ಷದಲ್ಲಿದ್ದ ವೇಳೆ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮುನಿರತ್ನ ಅವರಿಗೆ ಸಂಸ್ಕಾರದ ಕೊರತೆ ಇದೆ. ಮಹಿಳೆ ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ತಮ್ಮ ದುರಹಂಕಾರದ ಪರಮಾವಧಿಯನ್ನು ತಲುಪಿದ್ದಾರೆ. ಆದ್ದರಿಂದ ತಕ್ಷಣವೆ ಶಾಸಕ ಮುನಿರತ್ನರ ರಾಜೀನಾಮೆ ಪಡೆಯ ಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ನಡೆಸಿ ಹಳೇ ಬಸ್ ನಿಲ್ದಾಣ ಸಮೀಪ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಸಕಲೇಶಪುರ
ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಮುನಿರತ್ನ ಅವರ ವಿಧಾನಸಭಾ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಯುವ ಘಟಕದ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.ಕಾಂಗ್ರೆಸ್ ಪಕ್ಷದಲ್ಲಿದ್ದ ವೇಳೆ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮುನಿರತ್ನ ಅವರಿಗೆ ಸಂಸ್ಕಾರದ ಕೊರತೆ ಇದೆ. ಮಹಿಳೆ ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ತಮ್ಮ ದುರಹಂಕಾರದ ಪರಮಾವಧಿಯನ್ನು ತಲುಪಿದ್ದಾರೆ. ಆದ್ದರಿಂದ ತಕ್ಷಣವೆ ಶಾಸಕ ಮುನಿರತ್ನರ ರಾಜೀನಾಮೆ ಪಡೆಯ ಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ನಡೆಸಿ ಹಳೇ ಬಸ್ ನಿಲ್ದಾಣ ಸಮೀಪ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಗೊದ್ದು ಲೋಕೇಶ್, ಬ್ಯಾಕರವಳ್ಳಿ ವಿಜಯ ಕುಮಾರ್, ಪುರಸಭಾ ಸದಸ್ಯೆ ಅನ್ನಪೂರ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.