ನಾರಾಯಣಗೌಡರ ಬಂಧನ ಖಂಡಿಸಿ ಪ್ರತಿಭಟನೆ

| Published : Jan 05 2024, 01:45 AM IST

ಸಾರಾಂಶ

ಕನ್ನಡ ಪರ ಹೋರಾಟಗಾರರನ್ನು ಪೊಲೀಸರ ಮುಖಾಂತರ ಹತ್ತಿಕ್ಕುವುದು ಮತ್ತು ದಮನ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಕರವೇ ಕಾರ್ಯಕರ್ತರು ಜಿಲ್ಲೆಯಾದ್ಯಂತ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ಬೆಂಗಳೂರು ನಗರದ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆ ಕಟ್ಟಡಗಳು ಹಾಗೂ ಇನ್ನಿತರೆ ವ್ಯಾಪಾರ ಸ್ಥಳಗಳಲ್ಲಿ ಶೇ.೬೦ರಷ್ಟು ಕನ್ನಡ ಭಾಷೆ ಬಳಸುವಂತೆ ಅಗ್ರಹಿಸಿ ಟಿ.ಎ ನಾರಾಯಣಗೌಡರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಕರವೇ ರಾಜ್ಯಾದ್ಯಕ್ಷ ಟಿ.ಎ.ನಾರಾಯಣ ಗೌಡರನ್ನು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ರಬಕವಿ ಬನಹಟ್ಟಿ ತಾಲೂಕು ಘಟಕದಿಂದ ರಬಕವಿ-ಬನಹಟ್ಟಿ ತಹಸೀಲ್ದಾರಗೆ ಮನವಿ ಸಲ್ಲಿಸಲಾಯಿತು.

ಕನ್ನಡ ಪರ ಹೋರಾಟಗಾರರನ್ನು ಪೊಲೀಸರ ಮುಖಾಂತರ ಹತ್ತಿಕ್ಕುವುದು ಮತ್ತು ದಮನ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಕರವೇ ಕಾರ್ಯಕರ್ತರು ಜಿಲ್ಲೆಯಾದ್ಯಂತ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ರಬಕವಿ-ಬನಹಟ್ಟಿ ಶಿರಸ್ತೇದಾರ ಎಸ್. ಎಲ್. ಕಾಗಿಯವರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷೆ ರಾಜೇಶ್ವರಿ ಹಿರೇಮಠ, ವಹಿದಾ ನದಾಫ್, ತಾಲೂಕು ಪ್ರಧಾನ ಕಾರ್ಯದರ್ಶಿ ಬಸೀರ್ ಜಮಾದಾರ, ಮಲೀಕ ಜಮಾದಾರ, ಶಿರಾಜ ಗೈಬು ಸಾಬ, ಮಲ್ಲು ಭಂಡಾರಿ, ರೇಷ್ಮಾ, ಲಕ್ಷ್ಮಿ ಸೇರಿದಂತೆ ಅನೇಕರು ಇದ್ದರು.