ಸಾರಾಂಶ
ಚನ್ನಪಟ್ಟಣ: ಪತ್ರಕರ್ತರ ಮೇಲೆ ದರ್ಪ ತೋರಿದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸದಸ್ಯತ್ವ ವಜಾ ಮಾಡುವಂತೆ ಹಾಗೂ ಕ್ಷಮೆಯಾಚನೆಗೆ ಆಗ್ರಹಿಸಿ ತಾಲೂಕು ಪತ್ರಕರ್ತರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಚನ್ನಪಟ್ಟಣ: ಪತ್ರಕರ್ತರ ಮೇಲೆ ದರ್ಪ ತೋರಿದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸದಸ್ಯತ್ವ ವಜಾ ಮಾಡುವಂತೆ ಹಾಗೂ ಕ್ಷಮೆಯಾಚನೆಗೆ ಆಗ್ರಹಿಸಿ ತಾಲೂಕು ಪತ್ರಕರ್ತರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ತಾಲೂಕು ಪತ್ರಕರ್ತರು ನಾಸಿರ್ ಹುಸೇನ್ ನಡೆದುಕೊಂಡ ರೀತಿಯನ್ನು ಖಂಡಿಸಿ ಅವರ ವಿರುದ್ಧ ಘೋಷಣೆ ಕೂಗಿದರು.ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಸು.ತ.ರಾಮೇಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಲಕ್ಷ್ಮೀಪತಿ, ಜಿಲ್ಲಾ ಉಪಾಧ್ಯಕ್ಷ ಶಿವಮಾದು, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಅಭಿಲಾಷ್, ಖಜಾಂಚಿ ಮಹೇಶ್ ಮೆಂಗಳ್ಳಿ, ಗುರುಮೂರ್ತಿ, ಅಕ್ಕೂರು ರಮೇಶ್ ಇತರರಿದ್ದರು.ಪೊಟೋ೨೮ಸಿಪಿಟಿ೩:ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸದಸ್ಯತ್ವ ವಜಾಗೊಳಿಸುವಂತೆ ಹಾಗೂ ನಾಸೀರ್ ಹುಸೇನ್ ಕ್ಷಮೆಗೆ ಆಗ್ರಹಿಸಿ ಚನ್ನಪಟ್ಟಣ ತಾಲೂಕು ಪತ್ರಕರ್ತರು ತಹಸೀಲ್ದಾರ್ ನರಸಿಂಹಮೂರ್ತಿಗೆ ಮನವಿ ಸಲ್ಲಿಸಿದರು.