ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

| Published : Jun 17 2024, 01:35 AM IST

ಸಾರಾಂಶ

ಯಾದಗಿರಿ ನಗರದ ನೇತಾಜಿ ಸುಭಾಶ್ಚಂದ್ರ ಭೋಸ್‌ ವೃತ್ತದಲ್ಲಿ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರ ನೇತೃತ್ವದಲ್ಲಿ ಗಿರಿನಾಡು ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರ ನೇತೃತ್ವದಲ್ಲಿ ಗಿರಿನಾಡು ಟ್ಯಾಕ್ಸಿ ಚಾಲಕರು ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ನೇತಾಜಿ ಸುಭಾಶ್ಚಂದ್ರ ಭೋಸ್‌ ವೃತ್ತದಲ್ಲಿ ಟ್ಯಾಕ್ಸಿ ಚಾಲಕರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತೈಲ ಬೆಲೆ ಏರಿಕೆಯಿಂದ ರೈತರಿಗೆ, ಬಡವರಿಗೆ, ಟ್ಯಾಕ್ಸಿ, ಆಟೋ ಚಾಲಕರ ಮೇಲೆ ಹೊರೆಯಾಗುತ್ತಿದ್ದು, ತಕ್ಷಣ ರಾಜ್ಯ ಸರ್ಕಾರದ ತೈಲ ಬೆಲೆ ಏರಿಕೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿದರು. ಜನರಿಗೆ ಅನುಕೂಲ ಮಾಡಿಕೊಡಬೇಕಾದ ಸರ್ಕಾರದ ಜನಪ್ರತಿನಿಧಿಗಳು ಪಡೆಯುವ ಸವಲತ್ತುಗಳನ್ನ ತ್ಯಾಗ ಮಾಡಿ ಅಂತ ಜನಪ್ರತಿನಿಧಿಗಳ ವಿರುದ್ಧ ಕಿಡಿ ಕಾರಿದರು.

ರಫೀಕ್ ಪಟೇಲ್, ಬಾಬಾ ಖಾನ್, ನೈಮ್ ಶೇಕ್, ಮರೆಪ್ಪ, ರಫೀಕ್ ಅಪ್ಸರ್, ವೆಂಕಟರೆಡ್ಡಿ, ಚಂದ್ರಶೇಖರ, ಬನಶೆಂಕರ್, ಮಹಿಬೂಬ್, ಮುತ್ತು, ಬನ್ನಪ್ಪ, ಜಮಾಲ್ ಬಾಬಾ ಸಾಬನ್ನ, ಬಸ್ಸು, ನವೀನ್, ಖಂಡಪ್ಪ, ಅಯ್ಯನ, ಶೀವು, ಶರಣು, ಅಶೋಕ್ ಪಾಟೀಲ್, ರಶೀದ್ ಪಾಷಾ ಇತರರಿದ್ದರು.