ಸಾರಾಂಶ
ಸಂಘಟನೆ ಮುಖ್ಯಸ್ಥ ಮಂಜುನಾಥ್ ಮಾಹಿತಿ । ಸೂಕ್ತ ಕ್ರಮ ಜರುಗಿಸಲು ಒತ್ತಾಯ
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಮೇ.೪ ರಂದು ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯುನ ಮುಖ್ಯಸ್ಥ ಮಂಜುನಾಥ್ ತಿಳಿಸಿದ್ದಾರೆ.
ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ದೇಶದಲ್ಲಿ ಹಾಸನ ಜಿಲ್ಲೆಯ ಜನರು ತಲೆತಗ್ಗಿಸುವಂತೆ ಮಾಡಿದ್ದಾರೆ. ಇಂತಹ ಹೇಯ ಕೃತ್ಯ ನಡೆಸಲು ಅವರ ಮನಸ್ಸು ಹೇಗೆ ಒಪ್ಪಿತು. ಇಂಥ ನೀಚ ವ್ಯಕ್ತಿಗೆ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಿ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಎಂದರು.ದಲಿತ ಮುಖಂಡ ದಂಡೋರ ಮಂಜುನಾಥ್ ಹಾಗೂ ರೈತ ಸಂಘದ ತಾಲೂಕು ಅಧ್ಯಕ್ಷ ಸಿ.ಜಿ.ರವಿ ಮಾತನಾಡಿ, ಜಿಲ್ಲೆಯಲ್ಲಿ ಮಹಿಳೆಯರಿಗೆ ಆಗಿರುವ ಅನ್ಯಾಯ ವಿರುದ್ಧ ನಮ್ಮ ಸಂಘಟನೆಗಳು ಧ್ವನಿ ಎತ್ತಲಿದ್ದು ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆ ಹಾಗೂ ಮುಂಬಡ್ತಿ ಕೊಡಿಸುವುದಾಗಿ ಆಮಿಷ ಒಡ್ಡಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡಿ ಅವರ ಇಡೀ ಕುಟುಂಬದ ಅವ್ಯವಸ್ಥೆಗೆ ಕಾರಣರಾದಂತಹ ಮಾಜಿ ಸಚಿವ ಎಚ್. ಡಿ. ರೇವಣ್ಣನವರ ಪುತ್ರ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದು ಇಂಥವರಿಗೆ ಕಾನೂನಿನ ಮೂಲಕ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ರೈತ ಸಂಘಟನೆ, ದಲಿತ ಸಂಘಟನೆ, ಸಿಐಟಿಯು, ಅಹಿಂದ ಸಂಘಟನೆ, ಮುಸ್ಲಿಂ ಕಮಿಟಿ, ಮಹಿಳಾ ಸಂಘಟನೆಗಳ ಮುಖಂಡರೊಟ್ಟಿಗೆ ಪಟ್ಟಣದ ಗಾಂಧಿ ಸರ್ಕಲ್‌ನಿಂದ ಹೊರಟು ಬಿ.ಎಂ.ರಸ್ತೆ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಗುವುದು. ಆದ್ದರಿಂದ ತಾಲೂಕಿನ ಎಲ್ಲಾ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಪಕ್ಷಾತೀತವಾಗಿ ನೊಂದ ಮಹಿಳೆಯರ ಪರವಾಗಿ ನಿಲ್ಲಬೇಕು ಎಂದು ತಿಳಿಸಿದರು.
ಉತ್ತೇನಹಳ್ಳಿ ಚಂದ್ರು, ಮಾಳೇನಹಳ್ಳಿ ಹರೀಶ್, ಪ್ರಸನ್ನ ಇದ್ದರು.ವಿವಿಧ ಸಂಘಟನೆಗಳ ಮುಖಂಡರು.
;Resize=(128,128))
;Resize=(128,128))
;Resize=(128,128))
;Resize=(128,128))