ಪ್ರಜ್ವಲ್‌ ಕಾಮಕಾಂಡದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

| Published : May 01 2024, 01:21 AM IST

ಪ್ರಜ್ವಲ್‌ ಕಾಮಕಾಂಡದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ವಿರುದ್ಧ ಮಂಗಳವಾರವೂ ಹುಬ್ಬಳ್ಳಿ, ಧಾರವಾಡ, ಕೋಲಾರ, ಚಿಕ್ಕಮಗಳೂರು, ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

- ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್‌ ಕಾರ್ಯಕರ್ತೆಯರ ಸಮಾವೇಶ

- ಹೋರಾಟಕ್ಕೆ ಪ್ರಗತಿಪರ ಸಂಘಟನೆಗಳ ಸಾಥ್‌ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ/ಬೆಂಗಳೂರು

ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ವಿರುದ್ಧ ಮಂಗಳವಾರವೂ ಹುಬ್ಬಳ್ಳಿ, ಧಾರವಾಡ, ಕೋಲಾರ, ಚಿಕ್ಕಮಗಳೂರು, ಬೆಂಗಳೂರು, ತುಮಕೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್.ಡಿ.ರೇವಣ್ಣರನ್ನು ಬಂಧಿಸಿ ಸೂಕ್ತ ತನಿಖೆ ನಡೆಸುವಂತೆ ಹಾಗೂ ಸಂತ್ರಸ್ತ ಮಹಿಳೆಯರನ್ನು ರಕ್ಷಿಸುವಂತೆ ಆಗ್ರಹಿಸಿದರು.

ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರು, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ, ಚೆನ್ನಮ್ಮ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದರು. ಇದೇ ವೇಳೆ, ಕೋಲಾರದಲ್ಲಿ ಪ್ರಜ್ವಲ್ ಮತ್ತು ರೇವಣ್ಣರನ್ನು ಬಂಧಿಸಿ ಸೂಕ್ತ ತನಿಖೆ ನಡೆಸುವಂತೆ ಹಾಗೂ ಸಂತ್ರಸ್ತ ಮಹಿಳೆಯರನ್ನು ರಕ್ಷಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.

ತುಮಕೂರಿನಲ್ಲೂ ಪೆನ್‌ಡ್ರೈವ್ ಪ್ರಕರಣದ ವಿರುದ್ಧ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಮತ್ತು ತುಮಕೂರು ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು. ಚಿಕ್ಕಮಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.