ಸಾರಾಂಶ
ಕೂಡಲೇ ಅವರನ್ನು ಸಂಪುಟಕ್ಕೆ ಮರು ಸೇರಿಸಿಕೊಂಡು ಸಮಾಜದ ಕ್ಷಮೆಯಾಚಿಸಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ
ಧಾರವಾಡ: ಅಹಿಂದ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಿರಿಯ ರಾಜಕಾರಣಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ರಾಜ್ಯ ಸರ್ಕಾರ ಸಚಿವ ಸ್ಥಾನದಿಂದ ಏಕಾಏಕಿ ವಜಾಗೊಳಿಸಿರುವ ಕ್ರಮ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಸದಸ್ಯರು ಪ್ರತಿಭಟನೆ ನಡೆಸಿದರು.
ಸದಾ ಕ್ರೀಯಾಶೀಲತೆಯಿಂದ ಶೋಷಿತ ಸಮುದಾಯದ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಚಿವ ಕೆ.ಎನ್.ರಾಜಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಿಂದ ವಜಾಗೊಳಿಸಿರುವ ಕ್ರಮ ಖಂಡನೀಯ. ಕೂಡಲೇ ಅವರನ್ನು ಸಂಪುಟಕ್ಕೆ ಮರು ಸೇರಿಸಿಕೊಂಡು ಸಮಾಜದ ಕ್ಷಮೆಯಾಚಿಸಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಎಫ್.ಎನ್.ಯಾದವಾಡ, ಟಿ.ಎಚ್.ತಳವಾರ, ಮಂಜು ಓಲೇಕಾರ, ಸುರೇಶ್ ಬಾಬು ತಳವಾರ, ಪಾಂಡುರಂಗ, ಬಸವರಾಜ ಕುರಬೇಟ್ಟ್ ಇದ್ದರು.