ಸಾರಾಂಶ
ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಯಾವ ರೀತಿ ಮೋಸ ಮಾಡುತ್ತಿದೆ ಎಂಬ ವಿಷಯವನ್ನು ತಿಳಿಸುವ ಉದ್ದೇಶದಿಂದ ಈ ಹೋರಾಟ ನಾವು ಹಮ್ಮಿಕೊಂಡಿದ್ದೇವೆ.
ಸಿದ್ದಾಪುರ; ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ, ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.೪ ಮೀಸಲಾತಿ ಹಾಗೂ ಶೋಷಿತರ ಅನುದಾನ ದುರ್ಬಳಕೆ ಖಂಡಿಸಿ ಪಕ್ಷದಿಂದದ ವತಿಯಿಂದ ಆಡಳಿತ ಕಾಂಗ್ರೆಸ್ ಪಕ್ಷದ ವಿರುದ್ಧ ಪಟ್ಟಣದ ರಾಮಕೃಷ್ಣ ಹೆಗಡೆ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ರಾಜ್ಯ ಕಾರ್ಯಕಾರಣಿ ಸಮಿತಿ ವಿಶೇಷ ಸದಸ್ಯ ಕೆ.ಜಿ. ನಾಯ್ಕ ಮಾತನಾಡಿ, ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಯಾವ ರೀತಿ ಮೋಸ ಮಾಡುತ್ತಿದೆ ಎಂಬ ವಿಷಯವನ್ನು ತಿಳಿಸುವ ಉದ್ದೇಶದಿಂದ ಈ ಹೋರಾಟ ನಾವು ಹಮ್ಮಿಕೊಂಡಿದ್ದೇವೆ. ಪ್ರತಿಯೊಂದು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಾಗಿದೆ. ಜನಸಾಮಾನ್ಯರ ಬದುಕಿಗೆ ಅತಿ ಕಷ್ಟವಾಗಿದೆ ಎಂದರು.ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ಮಾತನಾಡಿ, ಕಾಂಗ್ರೆಸ್ ಗ್ಯಾರಂಟಿ ಹೆಸರಿನಲ್ಲಿ ಬಡವರ ರೈತರ ರಕ್ತವನ್ನು ಹೀರುವ ಕೆಲಸವನ್ನು ಮಾಡುತ್ತಿದೆ. ನಮ್ಮ ಸಿದ್ದಾಪುರ ತಾಲೂಕಿನಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ರಸ್ತೆಯಲ್ಲಿ ಎಲ್ಲೂ ಹೊಂಡಗಳನ್ನು ಸರಿಯಾಗಿ ಮುಚ್ಚಿತ್ತಾ ಈ ಸರ್ಕಾರದಲ್ಲಿ ಅಧಿಕಾರಿಗಳದ್ದೇ ಕಾರು-ಬಾರು ಆಗಿದೆ. ಕಳೆದ ಎರಡು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದರು.
ಬಿಜೆಪಿ ಜಿಲ್ಲಾ ವಿಶೇಷ ಆಹ್ವಾನಿತ ಕೃಷ್ಣಮೂರ್ತಿ ಮಡಿವಾಳ, ಜಿಲ್ಲಾ ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ ಬೊರ್ಕರ್, ಜಿಲ್ಲಾ ವಿಶೇಷ ಆಮಂತ್ರಿತ ಗುರು ಶ್ಯಾನಭಾಗ್ ಮಾತನಾಡಿದರು.ಬಿಜೆಪಿ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಿದ್ದಾಪುರದಲ್ಲಿ ಬಿಜೆಪಿ ಮಂಡಲದಿಂ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು.