ಸಾರಾಂಶ
ಮುಡಾದಲ್ಲಿ ನಡೆದ ಸಾವಿರಾರು ಕೋಟಿ ಮೌಲ್ಯದ ನಿವೇಶನ ಹಗರಣದ ವಿರುದ್ಧ ಧ್ವನಿ ಎತ್ತಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಮುಡಾದಲ್ಲಿ ನಡೆದ ಸಾವಿರಾರು ಕೋಟಿ ಮೌಲ್ಯದ ನಿವೇಶನ ಹಗರಣದ ವಿರುದ್ಧ ಧ್ವನಿ ಎತ್ತಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನಲ್ಲೇ ಸರ್ಕಾರ ಬಂಧಿಸಿರುವುದು ಖಂಡನೀಯ ಎಂದರು. ಪ್ರತಿಭಟನೆ ಸಮಯದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಸಂದೀಪ ದೇಶಪಾಂಡೆ, ಈರಯ್ಯ ಖೋತ, ಮುರುಘೇಂದ್ರಗೌಡ ಪಾಟೀಲ, ಸಚಿನ್ ಕಡಿ, ಸಂತೋಷ ದೇಶನೂರ, ವಿಜಯ ಕೊಡಗಾನೂರ, ಸಿದ್ದು ಪಾಟೀಲ, ಪ್ರಸಾದ ದೇವರಮನಿ, ವಿಠ್ಠಲ ಸಾಯಣ್ಣವರ, ಸಂಜಯಕುಮಾರ ನವಲಗುಂದ, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.