ಮಹಿಳಾ ಮೀಸಲಾತಿ ಬಗ್ಗೆ ಕೇಂದ್ರ ಸರ್ಕಾರ ಅಪಪ್ರಚಾರ: ಆರೋಪ
ಕನ್ನಡಪ್ರಭ ವಾರ್ತೆ ಕೋಲಾರಮಹಿಳಾ ಮೀಸಲಾತಿ ಬಗ್ಗೆ ಕೇಂದ್ರ ಸರ್ಕಾರ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ವಿರುದ್ಧ ವಿನಾಕಾರಣ ಆರೋಪಗಳನ್ನು ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೇಮಮಾಲಿನಿ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದ ಬಳಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೇಮಮಾಲಿನಿ ಮಾತನಾಡಿ, ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ನಮ್ಮ ವಿರೋಧ ಡಿಲಿಮಿಟೇಷನ್‌ಗೆ, ದೇಶದಲ್ಲಿ ಚುನಾವಣೆಗಳು ನಡೆಯುತ್ತಿರುವಾಗ ತುರಾತುರಿಯಲ್ಲಿ ಮಸೂದೆ ಮಂಡನೆ ಮಾಡುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.ಪ್ರಸ್ತುತ ಮಹಿಳಾ ಮೀಸಲಾತಿ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದ್ದು, ದೇಶದಲ್ಲಿ ಜನಗಣತಿ ಮುಗಿದ ನಂತರ ಮಹಿಳಾ ಮೀಸಲಾತಿ ಮಾಡಲಿ ಹಾಗೂ ೨೦೨೩ರಲ್ಲೇ ಮಹಿಳಾ ಮೀಸಲಾತಿ ಬಿಲ್ ಪಾಸಾಗಿದ್ದು, ಪ್ರಸ್ತುತ ಲೋಕಸಭೆಯಲ್ಲಿರುವ ಇರುವ ಸಂಖ್ಯೆಗೆ ಅನುಗುಣವಾಗಿ ಮಹಿಳೆಯರಿಗೆ ಮೀಸಲಾತಿ ನೀಡಿದರೆ ಅದಕ್ಕೆ ಕಾಂಗ್ರೆಸ್ ಪಕ್ಷದ ವಿರೋಧ ಇಲ್ಲವೆಂದು ತಿಳಿಸಿದರು.ಚುನಾವಣೆ ಗಿಮಿಕ್‌ಗಾಗಿ ಬಿಜೆಪಿ ಸರ್ಕಾರ ಮೂರು ವಿಷಯಗಳನ್ನು ಒಟ್ಟಿಗೆ ತಂದು ಮಂಡನೆ ಮಾಡಿರುವುದನ್ನು ಕಾಂಗ್ರೆಸ್ ಪಕ್ಷ ಹಾಗೂ ಅದರ ಮಿತ್ರ ಪಕ್ಷಗಳು ವಿರೋಧಿಸಿದೆ. ಇದನ್ನು ಮಹಿಳೆಯರು ಅರ್ಥಮಾಡಿಕೊಳ್ಳಬೇಕು. ಮಹಿಳಾ ಮೀಸಲಾತಿಗೆ ಒತ್ತಾಯಿಸಿ ನಾವು ತಳಮಟ್ಟದಿಂದ ಹೋರಾಟ ನೆಡಸುವುದಾಗಿ ತಿಳಿಸಿದರು.ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಬೆಳ್ಳೂರು ವಿಜಯಲಕ್ಷ್ಮೀ, ರಾಜ್ಯ ಪ್ರಧಾನ ಪ್ರಧಾನ ಕಾರ್ಯದರ್ಶಿ ಚೂಡಾಮಣಿ, ಮುಖಂಡರಾದ ಸುಕನ್ಯ, ಲತಾಬಾಯಿ, ಹಂಸವೇಣಿ, ವೆಂಕಟರತ್ನಮ್ಮ, ತಮ್ಮಣ್ಣ, ಪ್ಯಾರೇಜಾನ್ ಇದ್ದರು.ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ
ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ನಮ್ಮ ವಿರೋಧ ಡಿಲಿಮಿಟೇಷನ್‌ಗೆ, ದೇಶದಲ್ಲಿ ಚುನಾವಣೆಗಳು ನಡೆಯುತ್ತಿರುವಾಗ ತುರಾತುರಿಯಲ್ಲಿ ಮಸೂದೆ ಮಂಡನೆ ಮಾಡುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.