ದಾಬಸ್‍ಪೇಟೆ: ತೈಲ, ರಸಗೊಬ್ಬರ ಬೆಲೆ ಏರಿಕೆ ತಕ್ಷಣ ವಾಪಸ್‌ ಪಡೆಯಲು ಮತ್ತು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಸಿಪಿಎಂ ಪಕ್ಷದ ದಾಬಸ್‍ಪೇಟೆ ವಲಯ ಸಮಿತಿಯಿಂದ ಪಟ್ಟಣದ ಉದ್ಧಾನೇಶ್ವರ ವೃತ್ತದಲ್ಲಿ ಸೌದೆ, ಅಡುಗೆ ಅನಿಲ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು

ದಾಬಸ್‍ಪೇಟೆ: ತೈಲ, ರಸಗೊಬ್ಬರ ಬೆಲೆ ಏರಿಕೆ ತಕ್ಷಣ ವಾಪಸ್‌ ಪಡೆಯಲು ಮತ್ತು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಸಿಪಿಎಂ ಪಕ್ಷದ ದಾಬಸ್‍ಪೇಟೆ ವಲಯ ಸಮಿತಿಯಿಂದ ಪಟ್ಟಣದ ಉದ್ಧಾನೇಶ್ವರ ವೃತ್ತದಲ್ಲಿ ಸೌದೆ, ಅಡುಗೆ ಅನಿಲ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ನರಸಿಂಹಮೂರ್ತಿ ಮಾತನಾಡಿ, 2014ರಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗಲೂ ದೇಶದಲ್ಲಿ ಪೆಟ್ರೋಲ್ ಬೆಲೆ ₹70 ದಾಟಿರಲಿಲ್ಲ. ಆದರೆ, ಇಂದು ಕಚ್ಚಾ ತೈಲದ ಬೆಲೆ ಕಡಿಮೆಯಿದ್ದರೂ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ಭಾರತೀಯ ರುಪಾಯಿ ಮೌಲ್ಯ ಕುಸಿಯುತ್ತಿರುವುದಕ್ಕೆ ಪ್ರಧಾನಿ ಮೋದಿ ಆಡಳಿತ ವೈಫಲ್ಯವೇ ಕಾರಣ ಎಂದು ದೂರಿದರು.

ಸಿಪಿಎಂ ಮುಖಂಡ ವೆಂಕಟೇಶ್ ಮಾತನಾಡಿ, ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ತೈಲ ಬೆಲೆಗಳನ್ನು ಏಕಾಏಕಿ ಹೆಚ್ಚಿಸಲಾಗಿದೆ. ಇದು ಜನಸಾಮಾನ್ಯರಿಗೆ ಹೊರೆಯಾಗಿದೆ. ಅನೇಕ ದೇಶಗಳು ತಮ್ಮ ನಾಗರಿಕರ ಹಿತರಕ್ಷಣೆಗಾಗಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿಯಂತ್ರಣ ಕ್ರಮಗಳನ್ನು ಕೈಗೊಂಡಿವೆ. ಆದರೆ ಭಾರತದಲ್ಲಿ ಜನಸಾಮಾನ್ಯರ ಬದುಕಿನ ಮೇಲೆ ಹೊರೆ ಹೆಚ್ಚಿಸುವುದೇ ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಜನಹಿತಕ್ಕಿಂತ ಬಿಜೆಪಿಗೆ ಚುನಾವಣೆ ಗೆಲ್ಲುವುದೇ ಮುಖ್ಯವಾಗಿದೆ ಎಂದು ಆರೋಪಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ವೀರಣ್ಣ, ಸಂಘಟನೆ ಪದಾಧಿಕಾರಿಗಳಾದ ಶಂಬಣ್ಣ, ಮಧು, ವಿಷಕಂಠ, ವಿಶ್ವನಾಥ್, ಬಾಲು, ವೆಂಕಟೇಶ್, ಚಂದ್ರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಪೋಟೋ 5 :

ದಾಬಸ್‍ಪೇಟೆಯ ಉದ್ಧಾನೇಶ್ವರ ವೃತ್ತದಲ್ಲಿ ಸಿಪಿಎಂ ಕಾರ್ಯಕರ್ತರು ತೈಲ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.