ಸಾರಾಂಶ
ರಾಮನಗರ: ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ, ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವಂತೆ ಆಗ್ರಹಿಸಿ ಹಾಗೂ ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ಅ.23ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಾಂತೀಯ ಮುಖಂಡ ಕೆ.ಮಲ್ಲಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ಸಾಕಷ್ಟು ವೈಫಲ್ಯಕ್ಕೆ ಒಳಗಾಗಿದೆ. ನಕಾಶೆ ರಸ್ತೆಗಳು ಮಾಯಾವಾಗುತ್ತಿವೆ. ಜಿಲ್ಲೆಯಲ್ಲಿ ಚಿರತೆ ಹಾಗೂ ಆನೆ ದಾಳಿ ಹೆಚ್ಚಾಗುತ್ತಿದ್ದು ಇದರ ನಿಯಂತ್ರ ಮಾಡಬೇಕಾಗಿರುವ ಅಧಿಕಾರಿಗಳು ಸುಮ್ಮನಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರ ಹಾಲು ಆಮದು ಮಾಡಿಕೊಳ್ಳಲು ಮುಂದಾಗಿದೆ. ಈ ಎಲ್ಲವನ್ನು ವಿರೋಧಿಸಿ ಹೋರಾಟ ಮಾಡಲಾಗುತ್ತಿದೆ ಎಂದರು.ರೈತ ಮುಖಂಡ ಚಿಲೂರು ಮುನಿರಾಜು ಮಾತನಾಡಿ, ಜಿಲ್ಲೆಯಲ್ಲಿ ನಕಾಶೆ ರಸ್ತೆಗಳು ಮಾಯವಾಗುತ್ತಿದೆ. ಹಾರೋಹಳ್ಳಿ ತಾಲೂಕಿನ ಗ್ರಾಮದಲ್ಲಿ ನಕಾಶೆ ರಸ್ತೆಯನ್ನು ಪರಭಾರೆ ಮಾಡಿಕೊಂಡು ನಿವೇಶನ ಮಾಡಿ 40 ಲಕ್ಷಕ್ಕೆ ಮಾರಾಟ ಮಾಡಲಾಗಿದೆ.ಈ ಬಗ್ಗೆ ಜಿಲ್ಲಾಡಳಿತಕ್ಕೆ ದೂರು ನೀಡಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾವು ಕಡಿತಕ್ಕೆ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಹಾವು ಕಡಿತದಿಂದಕಳೆದ ಮೂರು ವರ್ಷದಲ್ಲಿ ಜಿಲ್ಲೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮುಖಂಡ ಕುಮಾರಸ್ವಾಮಿ ಮಾತನಾಡಿ, ಕಳೆದ 20 ವರ್ಷದ ಹಿಂದೆ ಇದ್ದ ಗೋಮಾಳ ಇಂದು ಕಡಿಮೆಯಾಗಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಆರ್‌ಟಿಐ ಹಾಕಲಾಗುತ್ತಿದ್ದು, ಮಾಹಿತಿ ಪಡೆಯುವ ಕೆಲಸ ಮಾಡಲಾಗುತ್ತದೆ. ವರ್ಷ ಕಳೆದಂತೆ ಗೋಮಾಳದ ವ್ಯಾಪ್ತಿಯುಕಡಿಮೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅ.23ರಂದು ನಡೆಯುವ ಪ್ರತಿಭಟನೆಯು ಜಿಲ್ಲಾಡಳಿತ ನಿಗಧಿ ಪಡಿಸಿರುವ ಸ್ಥಳದಲ್ಲಿ ಮಾಡದೆ ಈ ಹಿಂದೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಡುತ್ತಿದ್ದ ಸ್ಥಳದಲ್ಲಿಯೇ ನಡೆಸಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಮಲ್ಲೇಶ್, ತಿಮ್ಮೇಗೌಡ ಇದ್ದರು.20ಕೆಆರ್ ಎಂಎನ್ 3.ಜೆಪಿಜಿಕರ್ನಾಟಕ ರಾಜ್ಯ ರೈತ ಸಂಘದ ಪ್ರಾಂತೀಯ ಮುಖಂಡ ಕೆ.ಮಲ್ಲಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.