ಸಾರಾಂಶ
13ರಂದು ಸರ್ಕಾರದ ವಿರುದ್ಧ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ರಾಮದುರ್ಗ
ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಘೋಷಣೆ ಮಾಡಿರುವ ಗ್ಯಾರಂಟಿ ಅನುಷ್ಠಾನ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ರೈತ ವಿರೋಧಿ ಸರ್ಕಾರದ ವಿರುದ್ಧ ಡಿ.13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಸಲಾಗುವುದು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಭಾನುವಾರ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ 250ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ, ರೈತರ ಹೊಸ ಪಂಪಸೆಟ್‌ಗಳಿಗೆ ವಿದ್ಯುತ್ ಸಂಪರ್ಕಕ್ಕೆ ತಂದಿರುವ ಹೊಸ ಕಾಯ್ದೆ ಹಿಂದಕ್ಕೆ ಪಡೆಯುವುದು ಮತ್ತು ಹಿಂದಿನ ಬಿಜೆಪಿ ಸರ್ಕಾರದ ರೈತಪರ ಯೋಜನೆಗಳಾದ ರೈತ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಕ್ಷೀರ ಸಮೃದ್ಧಿ ಬ್ಯಾಂಕ, ರೈತಶಕ್ತಿ ಯೋಜನೆ ಪುನಾರಂಭಿಸಲು ಒತ್ತಾಯಿಸುವುದಲ್ಲದೆ ಭೀಕರ ಬರಗಾಲದಲ್ಲಿ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.
ಬೆಳಗಾವಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯದ ನಾಯಕರು ಭಾಗವಹಿಸಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷಷ ರಾಜೇಶ ಬೀಳಗಿ, ಜಿಲ್ಲಾ ಕೋರ್ ಕಮಿಟಿ ಸದಸ್ಯ ಡಾ. ಕೆ. ವಿ. ಪಾಟೀಲ, ನ್ಯಾಯವಾದಿ ಪಿ. ಎಫ್. ಪಾಟೀಲ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿದ್ದರು.